ಚುನಾವಣಾ ಆಯೋಗದ ಕಚೇರಿ ಎದುರು ಹೈಡ್ರಾಮಾ….!

ನವದೆಹಲಿ:

     ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ಮತ್ತು ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ  ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು  ಪ್ರತಿಭಟಿಸಿ ವಿರೋಧ ಪಕ್ಷದ ಸಂಸದರು ಬೃಹತ್‌ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ , ಸಮಾಜವಾದಿ ಪಕ್ಷ, ಟಿಎಂಸಿ, ಡಿಎಂಕೆ, ಎಎಪಿ, ಎಡ ಪಕ್ಷಗಳು, ಆರ್‌ಜೆಡಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಹಲವಾರು ಪಕ್ಷಗಳು ಬೆಳಿಗ್ಗೆ 11.30 ಕ್ಕೆ ಸಂಸತ್ತಿನ ಮಕರ ದ್ವಾರದಿಂದ ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಹೈಡ್ರಾಮಾ ನಡೆಯುತ್ತಿದೆ.

   ಪೊಲೀಸರು ಹಾಗೂ ಸಂಸದರ ನಡುವೆ ವಾಗ್ವಾದ ನಡೆಯಿತು. ಚುನಾವಣಾ ಆಯೋಗದ ಕಚೇರಿ ಎದುರು ಸಂಸದರು ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಮೆರವಣಿಗೆಯು ಚುನಾವಣಾ ಆಯೋಗದ ಕಚೇರಿಯನ್ನು ತಲುಪಲು ಅನುಮತಿ ನೀಡಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಮೇಲೆ ಹಾರಿ ಅಖಿಲೇಶ್‌ ಯಾದವ್‌ ಒಳ ನುಗ್ಗಲು ಪ್ರಯತ್ನಿಸಿದರು.

   ಬಿಹಾರದ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಲು ಮತ್ತು “ಮತ ಕಳ್ಳತನ” ಎಂದು ಆರೋಪಿಸಿ ಪ್ರತಿಭಟನಾಕಾರರು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಪ್ರದರ್ಶಸಲಾಗುತ್ತಿದೆ. ಬಿಹಾರದಲ್ಲಿ ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾರರ ವಂಚನೆಯನ್ನು ಆರೋಪಿಸಿ ವಿರೋಧ ಪಕ್ಷದ ಇಂಡಿಯಾ ಬಣದ ಸುಮಾರು 300 ಸಂಸದರು ಸಂಸತ್ತಿನಿಂದ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ಪ್ರಾರಂಭಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರು ಮತ್ತು ಅವರೊಂದಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದರು.

   ಬಿಜೆಪಿ ಮತ್ತು ಚುನಾವಣಾ ಆಯೋಗವು ಮತದಾರರ ಪಟ್ಟಿಗಳನ್ನು ತಿರುಚುತ್ತಿದೆ ಎಂದು ಈ ಬಣ ಆರೋಪಿಸಿದೆ ಮತ್ತು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ಒತ್ತಾಯಿಸಿದೆ. ಬಿಹಾರದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳುವಂತೆ ಒತ್ತಾಯಿಸಿ ನಾಯಕರು ಈ ಹಿಂದೆ ಚುನಾವಣಾ ಸಮಿತಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದರು.

Recent Articles

spot_img

Related Stories

Share via
Copy link