ಶಿರಸಿ:
ರಾಜ್ಯದಲ್ಲಿಯೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಶಿರಸಿಯ ಶ್ರೀಮಾರಿಕಾಂಬಾ ಪ್ರೌಢಶಾಲೆಯಲ್ಲಿ ಗಂಡು ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಕಳೆದ ಹಲವಾರು ತಿಂಗಳಿಂದ ಇಲ್ಲದೇ 700 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅತೀವ ತೊಂದರೆಯಾಗಿತ್ತು. ಈ ಹಿನ್ನಲೆಯಲ್ಲಿ ಈ ಕೂಡಲೇ ಅರ್ಧವಾಗಿರುವ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಗುರುವಾರ ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಜಾಗೀರ್ದಾರ್ ಗೆ ಮನವಿ ಸಲ್ಲಿಸಿದರು.








