ಶಿರಸಿ:
ತಾಲೂಕು ದೊಡ್ನಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸುಮಾ ಉಗ್ರಣಕರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿ -ಕುಂದುಕೊರತೆ ನಿವಾರಣ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು . ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಸತೀಶ್ ಪಿ ನಾಯ್ಕ್,ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಗ್ಯಾರಂಟಿ ಯೋಜನಾ ಸಮಿತಿಯ ಎಲ್ಲಾ ಸದಸ್ಯರು ಮತ್ತು ಇಲಾಖಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು . ಪಂಚ ಗ್ಯಾರಂಟಿ ಯೋಜನೆಯ ಕುರಿತಂತೆ ಮಾಹಿತಿ ಹಾಗೂ ಕುಂದು ಕೊರತೆಗಳ ನಿವಾರಣೆಯ ಕುರಿತು ಕ್ರಮ ಕೈಗೊಳ್ಳಲಾಯಿತು.








