ಗುಳೇದಗುಡ್ಡ :
ಪಟ್ಟಣದ ಸಂಗೀತ ಶಿಕ್ಷಕ ಚಂದನ ವಾಹಿನಿಯ ಗಾನಗರಡಿ ಕಲಾವಿದ ಬಸವರಾಜ ಸಿಂದಗಿಮಠ ಅವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೊಡಮಾಡುವ ಜಿಲ್ಲಾ ಸ್ವಾತಂತ್ರ್ಯೋತ್ಸವ ಪ್ರಶಸ್ತಿಗೆ ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಆ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಶಸ್ತಿ ಪ್ರಧಾನ ನಡೆಯಲಿದೆ.








