ಉಪ ರಾಷ್ಟ್ರಪತಿ ಚುನಾವಣೆ : ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು!

ನವದೆಹಲಿ: 

  ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ.

   ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚೆಯನ್ನು ಆರಂಭಿಸಿದೆ.ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗುಜರಾತ್ ರಾಜ್ಯಪಾಲ ಅಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್ ಮತ್ತು ಜಮ್ಮು- ಕಾಶ್ಮೀರ ಮನೋಜ್ ಸಿನ್ಹಾ ಕೂಡಾ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ.

   ಆರ್ ಎಸ್ ಎಸ್ ವಿಚಾರವಾದಿ ಶೇಷಾದ್ರಿ ಚಾರಿ ಹೆಸರು ಕೂಡಾ ಕೇಳಿಬರುತ್ತಿದೆ. ಅಲ್ಲದೆ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ನಾಮನಿರ್ದೇಶಿತರನ್ನಾಗಿ ಪರಿಗಣಿಸಲಾಗಿದೆ. ಉಪ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ.

  ಜುಲೈ 21 ರಂದು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಜಗದೀಪ್ ಧನಕರ್ ಅವರು ಅನಿರೀಕ್ಷಿತ ರಾಜೀನಾಮೆ ನೀಡಿದ ನಂತರ ಉಪರಾಷ್ಟ್ರಪತಿ ಚುನಾವಣೆ ಅಗತ್ಯವಾಗಿದೆ.ಧಂಖರ್ ಅವರ ಹಠಾತ್ ನಿರ್ಗಮನದ ನಂತರ ಬಿಜೆಪಿ ಜಾಗರೂಕತೆಯಿಂದ ಹೆಜ್ಜೆ ಹಾಕುತ್ತಿದೆ. 

  ಸೆಪ್ಟಂಬರ್ 9 ರಂದು ಉಪ ರಾಷ್ಟ್ರಪತಿ ಚುನಾವಣೆ: ದಿನಾಂಕ ನಿಗದಿ ಮಾಡಿ ಆಯೋಗ ಆದೇಶ ಉಪರಾಷ್ಟ್ರಪತಿಯು ಹೆಚ್ಚಿನ ಅಧಿಕಾರವನ್ನು ಹೊಂದಿಲ್ಲದಿರಬಹುದು ಆದರೆ ರಾಜ್ಯಸಭೆಯಲ್ಲಿನ ಪ್ರಕ್ರಿಯೆಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ.

Recent Articles

spot_img

Related Stories

Share via
Copy link