ನಮ್ಮ ಮೆಟ್ರೋ : ಆರೆಂಜ್‌ ಲೈನ್‌​ಗಾಗಿ 6500 ಮರ ಕಡಿಯಲು ಮುಂದಾದ ಬಿಎಂಆರ್‌ಸಿಎಲ್‌

ಬೆಂಗಳೂರು:

    ಮತ್ತೆ ನಗರದಲ್ಲಿರುವ ಸಾವಿರಾರು ಮರಗಳನ್ನು ಕಡಿಯಲು ಬಿಎಂಆರ್​​ಸಿಎಲ್  ಮುಂದಾಗಿದೆ. ನಮ್ಮ ಮೆಟ್ರೋ  ಮೂರನೇ ಹಂತದ  ಯೋಜನೆಗಾಗಿ ಬರೋಬ್ಬರಿ 6500 ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ತಿರ್ಮಾನ ಮಾಡಲಾಗಿದೆ. 1ನೇ ಕಾರಿಡಾರ್​​ ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿಲೋ ಮೀಟರ್​ ಮಾರ್ಗದಲ್ಲಿ 21 ನಿಲ್ದಾಣಗಳು ಇರಲಿವೆ. 2ನೇ ಕಾರಿಡಾರ್​​ ಹೊಸಹಳ್ಳಿಯಿಂದ ಕಡಬಗೆರೆಯ ವರೆಗೂ ಇರಲಿದ್ದು, 12.50 ಕಿಲೋ ಮೀಟರ್ ಇರಲಿದೆ. ಇದರಲ್ಲಿ 9 ನಿಲ್ದಾಣಗಳು ಇರಲಿವೆ.

   ಮೆಟ್ರೋ ಮೂರನೇ ಹಂತವು ಒಟ್ಟು 44.65 ಕಿ.ಮೀ ಉದ್ದವಿರುವ ಎರಡು ಮೆಟ್ರೋ ಮಾರ್ಗಗಳನ್ನು ಹೊಂದಿರಲಿದೆ. 15,611 ಕೋಟಿ ರೂ. ವೆಚ್ಚದಲ್ಲಿ ಎರಡು ಮಾರ್ಗಗಳ ಕಾಮಗಾರಿ ನಡೆಯಲಿದೆ. ಮರಗಳನ್ನು ಕಡಿಯುವ ಬಗ್ಗೆ ಪರಿಸರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ಮೆಟ್ರೋ ಅಧಿಕಾರಿಗಳು ಪರಿಸರ ಹೋರಾಟಗಾರರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ನೂರಾರು ಹೋರಾಟಗಾರರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

   ಈ ಹಿಂದೆ ಕಿತ್ತಳೆ ಮಾರ್ಗದ ಕಾಮಗಾರಿಗಾಗಿ 11 ಸಾವಿರ ಮರಗಳನ್ನು ಕಡಿಯಲು ಸಿದ್ಧತೆ ಮಾಡಿಕೊಂಡಿದ್ದ ಬಿಎಂಆರ್​​ಸಿಎಲ್, ಪರಿಸರ ಹೋರಾಟಗಾರರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣ ಸಂಖ್ಯೆ ಕಡಿತಗೊಳಿಸಿತ್ತು. ಇದೀಗ 6500 ಮರಗಳನ್ನು ಕಡಿಯಲು ತೀರ್ಮಾನ ಮಾಡಲಾಗಿದೆ. ನಗರದಲ್ಲಿ ಈಗಲೇ ಜನರಿಗೆ ಉಸಿರಾಡಲು ಶುದ್ಧವಾದ ಗಾಳಿ ಸಿಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ಮತ್ತೆ ಮತ್ತೆ ಮರಗಳನ್ನು ನಾಶ ಮಾಡುತ್ತಾ ಹೋದರೆ, ಬೆಂಗಳೂರು ಮತ್ತೊಂದು ದೆಹಲಿ ಆಗುವುದರಲ್ಲಿ ಅನುಮಾನವಿಲ್ಲ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recent Articles

spot_img

Related Stories

Share via
Copy link