ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

ದಕ್ಷಿಣಕನ್ನಡ :

    ಧರ್ಮಸ್ಥಳ ಪ್ರಕರಣಕ್ಕೆ  ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣವರ್ , ಮಹೇಶ್ ತಿಮರೋಡಿ  ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಇದೀಗ ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೂಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಅಶ್ಲೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

   ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಗಿರೀಶ್‌ ಅಪಪ್ರಚಾರ ನಡೆಸುತ್ತಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟಟಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ. 

   ರೌಡಿಶೀಟರ್‌ನನ್ನು ಮಾನವ ಹಕ್ಕು ಅಧಿಕಾರಿ ಎಂದು ಪೋಲಿಸರಿಗೆ ತಪ್ಪು ಮಾಹಿತಿ ನೀಡಿರುವ ಗಿರೀಶ್‌ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರಿನ ಸುರೇಶ್‌ ಎಚ್‌.ಎಂ. ಎಂಬುವವರು ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ಗಿರೀಶ್ ಮಟ್ಟಣ್ಣನವರ್‌, ಹುಬ್ಬಳ್ಳಿ-ಧಾರವಾಡ ರೌಡಿ ಶೀಟರ್ ಮದನ್ ಬುಗಡಿಯನ್ನು ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪೋಲಿಸರಿಗೆ ಪರಿಚಯಿಸಿದ್ದು, ಇದು ಅತ್ಯಂತ ಗಂಭೀರ ವಿಷಯವಾಗಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Recent Articles

spot_img

Related Stories

Share via
Copy link