ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ

ಬೆಂಗಳೂರು

   ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್  ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಭಾರತಿ ಅವರು ಸಿಎಂ ಬಳಿ ಮನವಿಯನ್ನು ಇಟ್ಟಿದ್ದಾರೆ.

   ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ ಭಾರತಿ.

   ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ. ಅಭಿಮಾನಿಗಳು ಈ ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ಈಗ ಅಭಿಮಾನಿಗಳ ಪರವಾಗಿ ಭಾರತಿ ಕೂಡ ಈ ರೀತಿಯ ಮನವಿ ಮಾಡಿದ್ದಾರೆ. ‘ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.

   ಅಭಿಮಾನ್ ಸ್ಟುಡಿಯೋದ 10 ಗುಂಟೆ ಜಾಗ ಬೇಕು ಎಂಬ ವಿಚಾರದಲ್ಲಿ ಈಗಾಗಲೇ ಭಾರತಿ ಅವರು ಅರಣ್ಯ ಇಲಾಖೆಯ ಬಳಿಯೂ ಮಾತನಾಡಿದ್ದಾರಂತೆ. ಮಂಟಪವನ್ನು ತಾವೇ ಕಟ್ಟಿಸಿಕೊಳ್ಳೋದಾಗಿ ಹೇಳಿದ್ದಾರೆ. ಸೆಪ್ಟೆಂಬರ್ 18 ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ 10 ಗುಂಟೆ ಜಾಗ ಸೆಪ್ಟೆಂಬರ್ 17ರ ಒಳಗೆ ಸಿಕ್ಕರೆ ಖುಷಿ ಎಂದು ಅವರು ಹೇಳಿದ್ದಾರೆ.

Recent Articles

spot_img

Related Stories

Share via
Copy link