ಬಾಗೇಪಲ್ಲಿ:
ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದ ದೇವಿರೆಡ್ಡಿಪಲ್ಲಿ, ನಲ್ಲಪರೆಡ್ಡಿಪಲ್ಲಿ, ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ, ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಬ್ಯಾಗ್ ವಿತರಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಚೀಮುಲ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅವೆಲ್ಲವುಗಳ ಪೈಕಿ ಸರಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಬಹಳಷ್ಟು ಖುಷಿಯ ವಿಚಾರವಾಗಿದೆ. ಈ ಭಾಗ ದಲ್ಲಿ ಮಕ್ಕಳು ಶೈಕ್ಷಣಿಕವಾಗಿ ಮುಂದುವರೆಯಬೇಕು, ಶೈಕ್ಷಣಿಕ ಪ್ರಗತಿಯೇ ನಿಜವಾದ ಅಭಿವೃದ್ಧಿ ಯಾಗುತ್ತದೆ ಎಂದರು.
ಆ ನಿಟ್ಟಿನಲ್ಲಿ ತಾಲೂಕಿನಲ್ಲಿ ವಸತಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮವಾಗುತ್ತಿದೆ. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗೊಂದು ವಸತಿ ಶಾಲೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ದರು.
ಇದೇ ವೇಳೆ ಚೀಮುಲ್ ನಿರ್ದೇಶಕ ಮಂಜುನಾಥರೆಡ್ಡಿ ಮಾತನಾಡಿ, ಸರಕಾರಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಸೇರಿದಂತೆ ಶಾಲಾ ಬ್ಯಾಗ್ ಮತ್ತು ಇತರ ಸಾಮಗ್ರಿ ಕೊಡುವುದಕ್ಕಿಂತಲೂ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆರಳತುದಿಗಳಲ್ಲೇ ಪ್ರಪಂಚದ ಹಾಗೂ ಹೋಗುಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳನ್ನ ನೀಡಲಾಗುತ್ತಿದೆ ಇದರಿಂದ ಬಹಳ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ ಸಿ,ಪಿಯುಸಿ ಹಾಗೂ ಐಎಎಸ್ ಪರೀಕ್ಷೆಗಳಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರ್.ಹನುಮಂತ ರೆಡ್ಡಿ, ಪಿಎಲ್ಡಿ ಬ್ಯಾಂಕ್ ನ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ, ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗರಾಜ್, ಶಿಕ್ಷಕರಾದ ವೈ.ಎ ಮಂಜುನಾಥ್, ಮುನಿರಾಜು ಮಂಜುಳಾ ಮತ್ತಿತರರು ಇದ್ದರು.
