ಬಿಹಾರ ವಿಧಾನ ಚುನಾವಣೆ ಹತ್ತಿರದಲ್ಲಿರುವಾಗಲೇ ಆರ್​​ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

ಪಾಟನಾ:

    ಬಿಹಾರ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಪಾಟ್ನಾದಲ್ಲಿ ಆರ್​ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ಮೂಲಗಳ ಪ್ರಕಾರ ರೈ, ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು. ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಭೂ ವಿವಾದ ಹಾಗೂ ವಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ಊಹಿಸಿದ್ದಾರೆ. ರೈ ಭೂ ಸಂಬಂಧಿತ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು. ಘಟನೆಯ ಬಗ್ಗೆ ತಿಳಿದ ಪೊಲೀಸ್ ತಂಡ ರೈ ಅವರನ್ನು ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸ್ಥಳದಿಂದ ಆರು ಕ್ಯಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಅಪರಾಧ ಎಸಗುತ್ತಿರುವುದು ಕಂಡುಬಂದಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಾಟ್ನಾ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಪರಿಚಯ್ ಕುಮಾರ್ ತಿಳಿಸಿದ್ದಾರೆ.

   ನಾಯಕನನ್ನು ಹತ್ಯೆ ಮಾಡಿ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಯಕನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

   ಪ್ರತ್ಯೇಕ ಘಟನೆಯಲ್ಲಿ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ತನ್ನ ಸಹೋದರನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ತನ್ನ ವಿಧವೆ ಅತ್ತಿಗೆ ಮತ್ತು ಆಕೆಯ ಮೂವರು ಹೆಣ್ಣುಮಕ್ಕಳನ್ನು ಸಹಚರನ ಸಹಾಯದಿಂದ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಹ್ರೈಚ್‌ನ ರಾಮೈಪೂರ್ವ ಗ್ರಾಮದ ನಿವಾಸಿ ಅನಿರುದ್ಧ್ ಕುಮಾರ್ ನನ್ನು 2018 ರಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ಅಣ್ಣ ಸಂತೋಷ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹಾಕಲಾಗಿತ್ತು ಎಂದು ಎಎಸ್ಪಿ(ಗ್ರಾಮೀಣ) ದುರ್ಗಾ ಪ್ರಸಾದ್ ತಿವಾರಿ ಅವರು ಹೇಳಿದ್ದಾರೆ. 

   ಕೊಲೆಯಾದ ಕೆಲವು ತಿಂಗಳ ನಂತರ ಜಾಮೀನು ಪಡೆದಿದ್ದ ಆರೋಪಿ ಅನಿರುದ್ಧ್, ತನ್ನ ಸಹೋದರನ ಪತ್ನಿ ಸುಮನ್(36)ರೊಂದಿಗೆ ವಾಸಿಸಲು ಆರಂಭಿಸಿದ್ದ ಮತ್ತು ಆಕೆಯೊಂದಿಗೆ ಸಂಬಂಧ ಹೊಂದಿದ್ದ. ಅವರಿಗೆ ಆರು ವರ್ಷದ ಅಂಶಿಕಾ ಮತ್ತು ಮೂರು ವರ್ಷದ ಲಾಡೊ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link