ಬುಡಕಟ್ಟು ಜನರ ಆಶಾಕಿರಣ ಇಲಾಜ್ ಸ್ಮಾರ್ಟ್ ಕ್ಲಿನಿಕ್: ಶಾಸಕ ಭೀಮಣ್ಣ

ಶಿರಸಿ:

    ದುರ್ಗಮ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಸೇವೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.ಇಂದು ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಕೊಡ್‌ವೆಸ್ ಸಂಸ್ಥೆ, ಬಯೋಕಾನ್ ಫೌಂಡೇಶನ್ ಹಾಗೂ ಬಂಡಲ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆರಂಭಿಸಲಾದ ಇಲಾಜ್ ಸ್ಮಾರ್ಟ್ ಕ್ಲಿನಿಕ್‌ನ್ನು ಉದ್ಘಾಟಿಸಿ ಮಾತನಾಡಿದರು.

    ಪಶ್ಚಿಮ ಘಟ್ಟದ ಕಡಿದಾದ ಗುಡ್ಡ ಬೆಟ್ಟಗಳು ಹಾಗೂ ಅರಣ್ಯ ಪ್ರದೇಶಗಳಲ್ಲಿರುವ ಜನರ ಆರೋಗ್ಯ ಸೇವೆಗೆ ವಿನೂತನ ಮಾದರಿಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಯೋಜನೆಯನ್ನು ರೂಪಿಸಿದ ಬಯೋಕಾನ್ ಫೌಂಡೇಶನ್, ಇತರ ಕಡೆಗಳಲ್ಲೂ ಸ್ಮಾರ್ಟ್ ಕ್ಲಿನಿಕ್ ಆರಂಭಿಸುವಂತೆ ಮನವಿ ಮಾಡಿದರು.

    ಉಪಸ್ಥಿತರಿದ್ದ ಬಯೋಕಾನ್ ಫೌಂಡೇಶನ್‌ನ ಮಿಷನ್ ಡೈರೆಕ್ಟರ್ ಡಾ. ಅನುಪಮಾ ಶೆಟ್ಟಿಯವರು ಇಲಾಜ್ ಸ್ಮಾರ್ಟ್ ಕ್ಲಿನಿಕ್‌ನ್ನು ಮೊದಲ ಬಾರಿಗೆ ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಇತರ ಕಡೆಗಳಲ್ಲೂ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್‌ನ ಅಧ್ಯಕ್ಷ ದೇವರಾಜ ಮರಾಠಿ ಮಾತನಾಡಿದರು.

Recent Articles

spot_img

Related Stories

Share via
Copy link