ಸಚಿವರಾದ ಡಿ.ಕೆ.ಶಿವಕುಮಾರ್‌, ರಹೀಮ್‌ ಖಾನ್‌ ಖಾತೆಯಲ್ಲಿ ತುಸು ಬದಲಾವಣೆ

ಬೆಂಗಳೂರು:‌

    ರಾಜಧಾನಿ ಬೆಂಗಳೂರು ಆಡಳಿತ ನಿರ್ವಹಣೆಗೆ ಬಿಬಿಎಂಪಿ ರದ್ದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವರಾದ ಡಿ.ಕೆ.ಶಿವಕುಮಾರ್‌ ಮತ್ತು ರಹೀಮ್‌ ಖಾನ್‌ ಅವರ  ಖಾತೆಯಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.

   ಈ ಮೊದಲು ಡಿ.ಕೆ.ಶಿವಕುಮಾರ್‌ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್  ಸೇರಿ ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು.

   ಇದೀಗ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ನಗರ ಯೋಜನೆಗೆ ಸಂಬಂಧಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ಪಾಲಿಕೆಗಳು ಮತ್ತು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು , ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಎಲ್ ಆಡಳಿತ ಹೊಣೆ ನೀಡಲಾಗಿದೆ.

   ಇನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್‌ ಖಾನ್ ಅವರ ಖಾತೆ ಹಾಗೆಯೇ ಉಳಿದಿದ್ದರೂ‌, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಜವಾಬ್ದಾರಿ ಮಾತ್ರ ಡಿ.ಕೆ.ಶಿವಕುಮಾರ್‌ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ರಾಜ್ಯಪಾಲರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link