ಸಿನಿಮಾ ಟಿಕೆಟ್ ಏಕರೂಪ ದರ; ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​ಗೆ ನೋಟಿಸ್

ಬೆಂಗಳೂರು: 

  ಸಿನಿಮಾ ಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ ಮಾಡಿದ್ದ  ಸರ್ಕಾರದ ಆದೇಶವನ್ನು ಹೊಂಬಾಳೆ ಫಿಲ್ಮ್ಸ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​, ಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದವು. ಇತ್ತೀಚೆಗೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸೇರಿ ಅನೇಕ ಸಿನಿಮಾಗಳಿಗೆ ಟಿಕೆಟ್‌ ದರ ಹೆಚ್ಚಿಸಿಕೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಸಂಬಂಧಿಸಿ ಈಗ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

   ಟಿಕೆಟ್ ದರ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮೇಲ್ಮವಿ ಸಲ್ಲಿಕೆ ಮಾಡಿದೆ. ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​ಗೆ ಹೈಕೋರ್ಟ್ ನೋಟಿಸ್ ನೀಡಿದೆ.

  200 ರೂಪಾಯಿಗಿಂತ  ಹೆಚ್ಚಿನ ಹಣ ಸಂಗ್ರಹ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಕೋರ್ಟ್ ಹೇಳಿದೆ. ಒಂದೊಮ್ಮೆ ಅರ್ಜಿ ವಿಚಾರಣೆಯ ಬಳಿಕ ಸರ್ಕಾರದ ಪರ ಅಂತಿಮ ತೀರ್ಪು ಬಂದರೆ ಪ್ರೇಕ್ಷಕನಿಂದ ಪಡೆದ ಹೆಚ್ಚುವರಿ ಹಣ ಮರಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ಬಗ್ಗೆ ಚಿತ್ರಮಂದಿರದಲ್ಲಿ ಪ್ರಕಟಿಸಲು ಕೋರ್ಟ್ ಸೂಚನೆ ನೀಡಿದೆ. 

   ಸರ್ಕಾರದ ಪರ ಎಎಜಿ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದಾರೆ. ‘ಸರ್ಕಾರದ ನಿಯಮ ಕಾನೂನುಬದ್ಧ ಆಗಿದೆ’ ಎಂದು ಕೋರ್ಟ್​ಗೆ ಮನವರಿಕೆ ಮಾಡಿದ್ದಾರೆ. ವಾಣಿಜ್ಯ ಮಂಡಳಿ ಪರ ಹಿರಿಯ ವಕೀಲ ವಿ.‌ಲಕ್ಷ್ಮೀನಾರಾಯಣ ವಾದ ಮಾಡಿದ್ದಾರೆ. ‘ವಾಣಿಜ್ಯ ಮಂಡಳಿ ಮನವಿ ಮೇರೆಗೆ ಸರ್ಕಾರ ದರ ನಿಗದಿ ಮಾಡಿದೆ. ಹೀಗಾಗಿ ದರ ನಿಗದಿ ಆದೇಶಕ್ಕೆ ನೀಡಿದ ತಡೆಯಾಜ್ಞೆ ತೆರವು ಮಾಡಬೇಕು’ ಎಂದು ಅವರು ಕೋರಿದ್ದಾರೆ.

Recent Articles

spot_img

Related Stories

Share via
Copy link