ಕಿಲ್ಲರ್‌ ಕಾಫ್‌ ಸಿರಪ್‌ಗೆ ಮತ್ತೆ 6 ಬಲಿ….!

ಬೆಂಗಳೂರು:

    ಮಧ್ಯ ಪ್ರದೇಶದಲ್ಲಿ  ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೇರಿದೆ. ಇದರ ಹಿನ್ನೆಲೆಯಲ್ಲಿ, ಕರ್ನಾಟಕ  ರಾಜ್ಯದಲ್ಲಿ ಕಾಫ್ ಸಿರಪ್‌ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಕಾಪಾಡಲು ಪೋಷಕರು ಹಾಗೂ ಆರೈಕೆದಾರರು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು.

ಈ ನಿಯಮಗಳ ಪಾಲನೆ ಕಡ್ಡಾಯ

1) 02 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಅಥವಾ ಶೀತದ ಸಿರಪ್ ನೀಡಬಾರದು.2) 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಗಳನ್ನು ನೀಡಬೇಕು.3) 5 ವರ್ಷ ದಾಟಿದ ಮಕ್ಕಳಿಗೆ ವೈದ್ಯರ ಸಲಹೆಯಂತೆ ಸಿರಪ್ ಬಳಸಬೇಕು.4) ಸಾಧ್ಯವಾದಷ್ಟೂ ಕಡಿಮೆ ಅವಧಿಗೆ ಕನಿಷ್ಠ ಡೋಸ್ಗಳನ್ನು ಬಳಸಬೇಕು.5) ಬಹು ಔಷಧಗಳ ಸಂಯೋಜನೆ ಇರುವ ಸಿರಪ್ಗಳನ್ನು ಬಳಸಬಾರದು.6) ಮಕ್ಕಳಿಗೆ ಸ್ವಯಂ ಔಷಧೋಪಚಾರ ಮಾಡಬಾರದು.7) ವೈದ್ಯರ ಸೂಚನೆ ಇಲ್ಲದೇ ಕೆಮ್ಮಿನ ಔಷಧಿ ಖರೀದಿಸಬಾರದು, ಬಳಸಬಾರದು.8) ಈ ಹಿಂದೆ ಬಳಸಿ ಉಳಿದ ಔಷಧಿಯನ್ನು ಮತ್ತೆ ಬಳಸಬಾರದು.9) ವೈದ್ಯರಲ್ಲದವರು ಶಿಫಾರಸ್ಸು ಮಾಡಿದ ಔಷಧವನ್ನು ಬಳಸಬಾರದು.10) ಅವಧಿ ಮುಗಿದ ಔಷಧವನ್ನು ತೆಗೆದುಕೊಳ್ಳಬಾರದು.

Recent Articles

spot_img

Related Stories

Share via
Copy link