ಬಾವಿಗೆ ಹಾರಿದ ಮಹಿಳೆ ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು!

ಕೊಲ್ಲಂ: 

   ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ.

   ಪೊಲೀಸರ ಪ್ರಕಾರ, ಮಧ್ಯರಾತ್ರಿಯ ಸುಮಾರಿಗೆ, ನೆಡುವತೂರಿನಲ್ಲಿ ಮಹಿಳೆಯೊಬ್ಬರು 80 ಅಡಿ ಆಳದ ಬಾವಿಗೆ ಹಾರಿದ್ದಾರೆ ಎಂದು ವರದಿಯಾಗಿತ್ತು. ಅದಾದ ನಂತರ ಅಗ್ನಿಶಾಮಕ ಠಾಣೆಗೆ ಕರೆ ಬಂತು. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಿಸುವ ಪ್ರಯತ್ನ ಆರಂಭಿಸಿತು.

   ಸೋನಿ ಕುಮಾರ್ ಸುರಕ್ಷತಾ ಸಾಧನಗಳನ್ನು ಧರಿಸಿ ಬಾವಿಗೆ ಇಳಿಯುತ್ತಿದ್ದಂತೆ, ಬಾವಿಯ ಪ್ಯಾರಪೆಟ್ ಕುಸಿದು ಅವರ ಮತ್ತು ಅರ್ಚನಾ ಮೇಲೆ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. ಹತ್ತಿರದಲ್ಲಿ ನಿಂತಿದ್ದ ಶಿವಕೃಷ್ಣನ್ ಕೂಡ ಬಾವಿಗೆ ಬಿದ್ದಿದ್ದರಿಂದ ಬಾವಿಯ ರಚನೆ ಸಡಿಲವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

   ಅಗ್ನಿಶಾಮಕ ದಳದವರು ಶೀಘ್ರದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಂಭೀರ ಗಾಯಗೊಂಡ ಮೂವರನ್ನು ಬಾವಿಯಿಂದ ಹೊರತೆಗೆಯಲಾಯಿತು.ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ಸಮಸ್ಯೆಗಳಿಂದಾಗಿ ಅರ್ಚನಾ ಬಾವಿಗೆ ಹಾರಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಸಂಬಂಧ ತನಿಖೆ ನಡೆಯುತ್ತಿದೆ.

Recent Articles

spot_img

Related Stories

Share via
Copy link