HMT ಕಾರ್ಖಾನೆಗೆ ಮರುಜೀವ- ಡಿಪಿಆರ್‌ ಸಿದ್ಧವಾಗುತ್ತಿದೆ : ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: 

   ಪ್ರತಿಷ್ಠಿತ ಎಚ್‌ಎಂಟಿ ಕಾರ್ಖಾನೆಗೆ  ಮರುಜೀವ ನೀಡಲು ಸಮಗ್ರ ಯೋಜನಾ ವರದಿ  ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ  ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಚ್‌ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು  ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿಸಿದರು.

   ನೀತಿ ಆಯೋಗದ ಸದಸ್ಯರು ಆಗಿರುವ ಡಾ. ವಿ.ಕೆ. ಸಾರಸ್ವತ ಅವರು ಎಚ್‌ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಬೃಹತ್ ಕೈಗಾರಿಕೆ ಸಚಿವಾಲಯದ ಉನ್ನತ ಅಧಿಕಾರಿಗಳು, ಎಚ್‌ಎಂಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿ.ಕೆ.ಸಾರಸ್ವತ ಅವರೊಂದಿಗೆ ನವದೆಹಲಿಯಲ್ಲಿ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿದ್ದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

   ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದರು.

Recent Articles

spot_img

Related Stories

Share via
Copy link