ನವಿ ಮುಂಬೈ: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮುಂಬೈ: 

   ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.ಘಟನೆಯಲ್ಲಿ ಆರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ ಅವಘಡ ಸಂಭವಿಸಿದೆ.

   ಬೆಂಕಿಯಲ್ಲಿ ಮೂರು ಫ್ಲಾಟ್‌ಗಳು ಸುಟ್ಟುಹೋಗಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆ ಆರಂಭಿಸಲಾಗಿದೆ. ಮೃತರನ್ನು ವೈದಿಕ್ ಬಾಲಕೃಷ್ಣ (6), ಪೂಜಾ ರಾಜನ್ (39), ಸುಂದರ್ ಬಾಲಕೃಷ್ಣನ್ (46), ಮತ್ತು ಕಮಲ್ ಹೀರಾಲಾಲ್ ಜೈನ್ (84) ಎಂದು ಗುರುತಿಸಲಾಗಿದೆ.

   10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 4 ಗಂಟೆ ಹೊತ್ತಿಗೆ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Recent Articles

spot_img

Related Stories

Share via
Copy link