ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರರು ಬಲಿ

ಬೆಂಗಳೂರು:

    ಬೆಂಗಳೂರಿನಲ್ಲಿ  ಮತ್ತೊಂದು ಹಿಟ್ ಆ್ಯಂಡ್‌ ರನ್  ಪ್ರಕರಣ ನಡೆದಿದ್ದು, ಇಬ್ಬರು ಬೈಕ್ ಸವಾರರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಈ ಅಪಘಾತ  ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.

     ಅಪಘಾತದಲ್ಲಿ ತೂಬಗೆರೆ ನಿವಾಸಿ ನಂದನ್ ಕುಮಾರ್ (22) ಹಾಗೂ ದೊಡ್ಡ ತಿಮ್ಮನಹಳ್ಳಿಯ ರವಿಕುಮಾರ್ (24) ಮೃತ ಯುವಕರು ಎಂದು ತಿಳಿದುಬಂದಿದೆ. ಮೃತರು ದೊಡ್ಡಬಳ್ಳಾಪುರ ನಗರದ ಎಲ್ ಆ್ಯಂಡ್‌ ಟಿ ಕಂಪನಿಯ ಸಿಬ್ಬಂದಿಗಳು ಎಂದು ತಿಳಿದುಬಂದಿದೆ. ಬೈಕ್‌ಗೆ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ನೆಲಕ್ಕಪ್ಪಳಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಅಪರಿಚಿತ ವಾಹನ ಸಮೇತ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link