ಬೆಂಗಳೂರು:
ಬಿಬಿಎಂಪಿ ಹೆಸರು ತೆಗೆದು ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ತಂದಿದ್ದ ಸರ್ಕಾರ ಇದೀಗ ಐದು ನಗರ ಪಾಲಿಕೆಗಳ ವಾರ್ಡ್ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂತಿಮ ವಾರ್ಡ್‌ಗಳ ಪಟ್ಟಿ ಪ್ರಕಟಿಸಿರೋ ಸರ್ಕಾರ ಇದೀಗ ಈ ಹಿಂದೆ ಇದ್ದ 368 ಇದ್ದ ವಾರ್ಡ್‌ಗಳ ಸಂಖ್ಯೆಯನ್ನ 369ಕ್ಕೆ ಹೆಚ್ಚಿಸಿದೆ. ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಹೆಚ್ಚುವರಿ ವಾರ್ಡ್ ಸೇರ್ಪಡೆ ಮಾಡಿದ್ದು, 369 ವಾರ್ಡ್‌ಗಳಿಗೆ ಸೀಮಿತಗೊಳಿಸಲಾಗಿದೆ. ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟಿಸಲು ಅಕ್ಟೋಬರ್ 15ರ ಒಳಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು.
2015ರಲ್ಲಿ ಬಿಬಿಎಂಪಿಯ 198 ವಾರ್ಡ್‌ಗೆ ಚುನಾವಣೆ ನಡೆದಿತ್ತು. ಆಯ್ಕೆಯಾದ ಜನಪ್ರತಿನಿಧಿಗಳು ಐದು ವರ್ಷ ಆಡಳಿತ ನಡೆಸಿ 2020ರ ಸೆಪ್ಟಂಬರ್‌ಗೆ ಅಧಿಕಾರ ಪೂರ್ಣಗೊಳಿಸಿದ್ದರು. ಆ ಬಳಿಕ 2 ಬಾರಿ ವಾರ್ಡ್ ವಿಂಗಡಣೆ ಮಾಡಲಾಗಿತ್ತು. ಆದರೆ ಈ ಸಂಬಂಧ ಯಾವುದೇ ಚುನಾವಣೆಗಳು ನಡೆದಿರಲಿಲ್ಲ. ಇದೀಗ ಬಿಬಿಎಂಪಿ ವಿಸರ್ಜನೆ ಮಾಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ, ಅದರ ಅಡಿಯಲ್ಲಿ ಐದು ನಗರ ಪಾಲಿಕೆ ಸೃಷ್ಟಿ ಮಾಡಲಾಗಿದ್ದು, ಈ ಐದು ಪಾಲಿಕೆಗೆ ವಾರ್ಡ್ ವಿಂಗಡಣೆ ಅಂತಿಮಗೊಳಿಸಲಾಗಿದೆ. ಹೀಗಾಗಿ ವಾರ್ಡ್‌ಗೆ ಮೀಸಲಾತಿ ನಿಗದಿ ಪಡಿಸಿ ಚುನಾವಣೆ ಅಧಿಸೂಚನೆ ಹೊರಡಿಸುವುದಷ್ಟೇ ಬಾಕಿ ಇದೆ. ಅಂದುಕೊಂಡಂತೆ ಆದ್ರೆ ಫೆಬ್ರವರಿ ಅಂತ್ಯದೊಳಗೆ ಜಿಬಿಎಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ.
ಎಂದು ಹೊಸದಾಗಿ ವಿಂಗಡನೆ ಮಾಡಲಾಗಿದೆ. ಬೆಂಗಳೂರಿನ ಜನಸಂಖ್ಯೆಯು 2011 ರಲ್ಲಿ 84 ಲಕ್ಷದಿಂದ 2025 ರಲ್ಲಿ ಅಂದಾಜು 144 ಲಕ್ಷಕ್ಕೆ ವೇಗವಾಗಿ ವಿಸ್ತರಿಸುತ್ತಿರುವುದರಿಂದ, ಪರಿಣಾಮಕಾರಿ ಆಡಳಿತಕ್ಕಾಗಿ ಉತ್ತಮ ನಿರ್ವಹಣೆ ಅತ್ಯಗತ್ಯವಾಗಿದೆ. ಅಂತಿಮ ಅಧಿಸೂಚನೆಯ ನಂತರ, ಸರ್ಕಾರವು ನವೆಂಬರ್ 30 ರ ಹೊತ್ತಿಗೆ ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನೂ ಸಹ ಪೂರ್ಣಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಸೆಪ್ಟೆಂಬರ್ 30 ರಂದು ಐದು ನಗರ ಪಾಲಿಕೆಯ ವಾರ್ಡ್ ವಿಂಗಡಣೆಯ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿತ್ತು. ಇದೀಗ ಕೊನೆಗೂ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ.








