NDA ಸರ್ಕಾರಕ್ಕೆ ಓವೈಸಿ ಬೆಂಬಲ……!

ಪಾಟ್ನ: 

      ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ.

      ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ ಷರತ್ತು ವಿಧಿಸಿರುವ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿ, ಕೋಮುವಾದವನ್ನು ದೂರವಿಟ್ಟರೆ ಬಿಹಾರದ ಎನ್‌ಡಿಎ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

     ಹೈದರಾಬಾದ್ ಸಂಸದರೂ ಆಗಿರುವ ಒವೈಸಿ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂನ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ ಬಿಹಾರದ ಈಶಾನ್ಯ ಪ್ರದೇಶವಾದ ಸೀಮಾಂಚಲಕ್ಕೆ ಎರಡು ದಿನಗಳ ಪ್ರವಾಸದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.”ಪಾಟ್ನಾದಲ್ಲಿ ರಚನೆಯಾದ ಹೊಸ ಸರ್ಕಾರಕ್ಕೆ ನಾವು ಶುಭ ಹಾರೈಸುತ್ತೇವೆ. ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿದರೆ ಮತ್ತು ಕೋಮುವಾದವನ್ನು ದೂರವಿಟ್ಟರೆ ನಾವು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಬಹುದು” ಎಂದು ಓವೈಸಿ ಹೇಳಿದ್ದಾರೆ.

Recent Articles

spot_img

Related Stories

Share via
Copy link