‘ಪಾಂಚಜನ್ಯ’ ಮೊಳಗಿಸಲು ಮೋದಿ ಬರ್ತಿದ್ದಾರೆ; ಸುನಿಲ್ ಕುಮಾರ್

ಉಡುಪಿ: 

    ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ. ಆಡಳಿತಕ್ಕಿಂತ ಹೆಚ್ಚಾಗಿ ಕುರ್ಚಿ ಕದನ ನಡೆಯುತ್ತಿದ್ದು ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಹಾಗೂ ಡಿಸಿಎಂ ನವದೆಹಲಿಗೆ ಸೀಮಿತರಾಗಿದ್ದಾರೆ ಎಂದ ಶಾಸಕ ವಿ.ಸುನಿಲ್‌ ಕುಮಾರ್‌ ಆರೋಪಿಸಿದ್ದಾರೆ.

   ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಾಗುವುದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಗ್ಗೆ ಯಾವುದೇ ವಿಶ್ವಾಸವಿಲ್ಲ. ಸದನದಲ್ಲಿ ನಾವು ವಿಶ್ವಾಸ ಮತವನ್ನು ಯಾಚಿಸುತ್ತೇವೆ ಎಂದರು.

    ಬಿಜೆಪಿ ಯಾವುದೇ ಕಾರಣಕ್ಕೂ ಸರಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್‌ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಉಪಮುಖ್ಯಮಂತ್ರಿಗಳ ಜತೆ 140 ಜನ ಎಲ್ಲಿದ್ದಾರೆ? ರಾಹುಲ್‌ ಗಾಂಧಿ ಹಾಗೂ ಸಿಎಂ ಅವರ ಜತೆಯಲ್ಲಿಯೂ ಯಾರೂ ಇಲ್ಲ ಎಂದರು.

   ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9.30ಕ್ಕೆ ರೋಡ್‌ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ಧರ್ಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ ಎಂದರು. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದರು.

Recent Articles

spot_img

Related Stories

Share via
Copy link