ದಿತ್ವಾ ಸೈಕ್ಲೋನ್‌ ಎಫೆಕ್ಟ್‌; ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು

    ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಕಂಡುಬರುತ್ತಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತ  ಪರಿಣಾಮದಿಂದ ನ.29 ಮತ್ತು 30ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ  ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

    ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 16°C ಇರುವ ಸಾಧ್ಯತೆ ಇದೆ.

   ಶ್ರೀಲಂಕಾದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಬೀಸುತ್ತಿರುವ ಚಂಡಮಾರುತ ದಿತ್ವಾ ಚಂಡಮಾರುತ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿದೆ. ಇದು ಶ್ರೀಲಂಕಾ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೂಲಕ ಉತ್ತರ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಬೆಳಗ್ಗೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿ ನೈರುತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

   ನ.29ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

    ನ.30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಡಿ. 1ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದೋ ಎರಡೋ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಡಿ. 2ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ. ಮಳೆಯಾಗುವ ಸಾಧ್ಯತೆಯಿದೆ.

    ಡಿ. 3ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Recent Articles

spot_img

Related Stories

Share via
Copy link