ಸಮುದಾಯದ ನಾಯಕನ ಪರ ನಿಲ್ಲಿ: ತಂದೆ ಪರ ಯತೀಂದ್ರ ಸಿದ್ದರಾಮಯ್ಯ ಬ್ಯಾಟಿಂಗ್‌

ಮಂಡ್ಯ

    ರಾಜಕೀಯ ಶಕ್ತಿಯಿಲ್ಲದಿದ್ದರೆ ನಮ್ಮ ಸಮುದಾಯ ಮೇಲೆ ಬರಲು ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲ ಒಟ್ಟಾಗಿ ಒಗ್ಗಟ್ಟಿನಿಂದ ಸಮುದಾಯದ ನಾಯಕನ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ  ಪರ ಪುತ್ರ ಯತೀಂದ್ರ  ಅವರು ತಮ್ಮ ತಂದೆಯ ಪರವಾಗಿ ಪರೋಕ್ಷ ಬ್ಯಾಟಿಂಗ್‌ ಮಾಡಿದ್ದಾರೆ.

    ಮಂಡ್ಯದ ಕನಕ ಭವನದಲ್ಲಿ ನಡೆದ ಕುರುಬರ  ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಲ್ಲಿ ಉಳಿಸಿಕೊಳ್ಳಿ ಎಂದು ಪರೋಕ್ಷವಾಗಿ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಕರೆ ನೀಡಿದ್ದಾರೆ. ಮತ್ತೊಂದು ಕಡೆ ದಲಿತರು ಸಿಎಂ ಆಗಿಲ್ಲ ಎಂಬ ದಾಳವನ್ನೂ ಉರುಳಿಸಿದ್ದಾರೆ.

    ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅರಸು ಅವರು ಮಾತ್ರ 5 ವರ್ಷ ಪೂರೈಸಿದ್ದಾರೆ. ಹಿಂದುಳಿದ ವರ್ಗದವರು ಸಣ್ಣತಪ್ಪು ಮಾಡಿದರೆ ಅದನ್ನು ದೊಡ್ಡದಾಗಿ ಬಿಂಬಿಸುತ್ತಾರೆ. ಇಲ್ಲದ ಹಗರಣವನ್ನು ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. 

     ರಾಜಕೀಯ ಶಕ್ತಿ ಇಲ್ಲದಿದ್ದರೆ ಸಮುದಾಯದ ಮೇಲೆ ಬರಲು ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲ ಒಗ್ಗಟ್ಟಾಗಬೇಕು. ಸಮುದಾಯವನ್ನು ಉದ್ಧಾರ ಮಾಡುವವರ ಹಿಂದೆ ನಿಂತು ಅವರಿಗೆ ಬೆಂಬಲ ಕೊಡಬೇಕು. ಸಿದ್ದರಾಮಯ್ಯ ಪರ ನಿಂತ ಹಿಂದುಳಿದ ವರ್ಗದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಧ್ವನಿಯಾಗಿ ರಾಜಕೀಯ ಪದವಿ ಬೇಕು. ರಾಜಕೀಯ ಪದವಿ ಇದ್ದರೆ ರಾಜಕೀಯವಾಗಿ ಸಮುದಾಯಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಜಾಗೃತರಾಗಿ ಸಮುದಾಯದ ಪರ ಇರುವ ನಾಯಕರನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು.

      ಸಮಾಜ ನಿಯಂತ್ರಿಸುವ ಉನ್ನತ ಸ್ಥಾನದಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕು. ಕಾರ್ಯಾಂಗ, ನ್ಯಾಯಾಂಗದಲ್ಲಿ ಪ್ರಬಲ ಸಮುದಾಯವರೇ ಇದ್ದಾರೆ. ಮಾಧ್ಯಮದಲ್ಲೂ ಮೇಲ್ವರ್ಗದವರೇ ಇದ್ದಾರೆ. ಉದ್ಯಮಿ, ಕೋಟ್ಯಧಿಪತಿ ಪಟ್ಟಿಯಲ್ಲಿ ಹಿಂದುಳಿದ ವರ್ಗದವರು ಇಲ್ಲ. ನಾವು ಅವರ ಸ್ಥಾನದಲ್ಲಿ ಕುಳಿತಾಗ ನಿಜವಾದ ಸಮಾನತೆ ಸಿಕ್ಕಂತಾಗುತ್ತದೆ. ಇದಕ್ಕಾಗಿ ನಾವು ಜಾಗೃತರಾಗಬೇಕು. ಇದಕ್ಕೆ ನಾವು ಶಿಕ್ಷಣ ಪಡೆದು ಶಿಕ್ಷಿತರಾಗಬೇಕು ಎಂದು ಹೇಳಿದರು.

Recent Articles

spot_img

Related Stories

Share via
Copy link