ಭಟ್ಕಳ :
ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಡಿಸೆಂಬರ್ 16ರ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಬೆಳಗ್ಗೆ 7.25ರ ಸುಮಾರಿಗೆ ತಹಸೀಲ್ದಾರ್ ಕಚೇರಿಯ ಇ ಮೇಲ್ ಐ ಡಿಗೆ”gaina ramesh@outlook.com” ಎಂಬ ಇಮೇಲ್ನಿಂದ ಕನ್ನಡದಲ್ಲಿ ಬಂದ ಸಂದೇಶದಲ್ಲಿ ಕಚೇರಿ ಆವರಣದಲ್ಲಿ ಶೀಘ್ರದಲ್ಲೇ ಬಾಂಬ್ ಸ್ಫೋಟವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ಎಲ್ಲರನ್ನೂ ತಕ್ಷಣ ತೆರವುಗೊಳಿಸುವಂತೆ ಸೂಚಿಸಲಾಗಿತ್ತು.ಇದು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಎಂಬ ಅನುಮಾನ ವ್ಯಕ್ತವಾಗಿದೆ.
ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಮಾಹಿತಿ ಪುಷ್ಟೀಕರಿಸಿದ್ದು, ತಕ್ಷಣ ಪೊಲೀಸರಿಗೆ ತಿಳಿಸಲಾಗಿದೆ. ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಿಗಿ ಬಂದೋಬಸ್ತ್ ಹಾಕಿ, ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳದೊಂದಿಗೆ ಸಂಪೂರ್ಣ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಸಿಗದೇ ಹುಸಿ ಬೆದರಿಕೆ ಎಂದು ದೃಢಪಟ್ಟಿದೆ.
ರಾಜ್ಯದಲ್ಲಿ ಹಲವು ಸರ್ಕಾರಿ ಕಚೇರಿಗಳಿಗೆ ಇಂತಹ ಬೆದರಿಕೆ ಇಮೇಲ್ಗಳು ಬರುತ್ತಿರುವುದು ಗಮನ ಸೆಳೆದಿದೆ.ಸೈಬರ್ ಪೊಲೀಸರು ಇಮೇಲ್ ಮೂಲ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದೆ.








