ಮೈಸೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಿವಾಸದ ಬಳಿ ಸೋಮವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ ಸವಿದರು. ಸಚಿವರಾದ ವೆಂಕಟೇಶ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು, ಶಾಸಕರೊಂದಿಗೆ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಅವರು ಮಸಾಲೆ ದೋಸೆ ಹಾಗೂ ಇಡ್ಲಿ ಸೇವಿಸಿದರು.
ಮೈಲಾರಿ ಹೋಟೆಲ್, ಮೃದುವಾದ ದೋಸೆ ಹಾಗೂ ಮಲ್ಲಿಗೆ ಇಡ್ಲಿಗೆ ಸಾಕಷ್ಟು ಫೇಮಸ್. ಸಿಎಂ ಅವರು ಪ್ರತಿ ಬಾರಿ ಮೈಸೂರಿಗೆ ಬಂದಾಗ ಸಿಎಂ ಬೆಣ್ಣೆ ದೋಸೆ, ಕಾಯಿ ಚಟ್ನಿ, ಆಲೂಗಡ್ಡೆ ಈರುಳ್ಳಿ ಪಲ್ಯ, ಇಡ್ಲಿ-ಚಟ್ನಿ ಸವಿಯುತ್ತಾರೆ. ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ ಎಂದು ಈ ಹಿಂದೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.








