ಉತ್ತರ ಕನ್ನಡ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಅಕ್ರಮ ಆಸ್ತಿ ಪ್ರಕರಣ ಹಿನ್ನಲೆ

ಕಾರವಾರ:

    ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲೀನ ದಾಳಿ ನಡೆಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಒಂದು ಪ್ರಮುಖ ಕಾರ್ಯಾಚರಣೆ ನಡೆದಿದೆ. ಸಿದ್ದಾಪುರ ತಾಲೂಕಿನ ಕೋಲಸಿರ್ಸಿ ಗ್ರೂಪ್ ಸೇವಾ ಸಹಕಾರಿ ಸಂಘದ CEO ಮಾರುತಿ ಯಶವಂತ ಮಾಳವಿ ಅವರ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಮೂಲತಃ ಹಳಿಯಾಳದಿಂದ ಬಂದಿರುವ ಮಾರುತಿ ಮಾಳವಿ ಇಲ್ಲಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಕೊಂಡ ಸುದ್ದಿಗಳಿವೆ.

    ಅಕ್ರಮ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಬೆಳಗ್ಗೆಯಿಂದಲೇ ಅಧಿಕಾರಿಗಳ ತಂಡ ಮಾಳವಿ ಅವರ ಮನೆಯಲ್ಲಿ ತಪಾಸಣೆ ನಡೆಸಿ, ಬ್ಯಾಂಕ್ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಇತರ ಮಹತ್ವದ ಕಾಗದಪತ್ರಗಳನ್ನು ಪರಿಶೀಲಿಸಿತು. ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿದಂತೆ ಇತರ ಜಿಲ್ಲೆಗಳಲ್ಲೂ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ.ಲೋಕಾಯುಕ್ತ ಮೂಲಗಳ ಪ್ರಕಾರ, ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಪಾದಿಸಿದ ಆಸ್ತಿಗಳ ವಿವರಗಳು ಬಯಲಾಗುತ್ತವೆ ಎಂದು ಹೇಳಲಾಗಿದೆ. ತನಿಖೆ ಮುಂದುವರಿದಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಬಿಡುಗಡೆಯಾಗಲಿದೆ.

Recent Articles

spot_img

Related Stories

Share via
Copy link