ಬೆಂಗಳೂರು
ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ದುರ್ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್‌ನಲ್ಲಿ ಸಂಭವಿಸಿದೆ. ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಇದ್ದ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








