ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಬಿಜೆಪಿ ಶಾಸಕ- ಕಾಂಗ್ರೆಸ್‌ ಎಂಎಲ್‌ಸಿ

ಬೀದರ್

     ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ  ಹುಮ್ನಾಬಾದ್​ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿರುವ ಘಟನೆ ನಡೆದಿದೆ.

   ಸಭೆ ನಡೆಯುತ್ತಿರುವ ವೇಳೆ ಮಾತನಾಡಿದ ಬಿಜೆಪಿ ಶಾಸಕ ಸಿದ್ದು ಪಾಟೀಲ್, ಹುಮ್ನಾಬಾದ್​​ನಲ್ಲಿ ಅರಣ್ಯ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಚಿವ ಈಶ್ವರ್​ ಖಂಡ್ರೆಗೆ ಹೇಳಿದ್ದಾರೆ. ಇದರಿಂದ ಕೆರಳಿದ ಭೀಮರಾವ್ ಪಾಟೀಲ್ ಅದನ್ನು ಕೇಳಲು ನೀನ್ಯಾರು? ಎಂದು ಏಕವಚನದಲ್ಲೇ ಪ್ರಶ್ನಿಸಿದ್ದಾರೆ. ಬಳಿಕ ಇಬ್ಬರು ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಭೆಯಲ್ಲಿ ಪರಿಸ್ಥಿತಿ ಕೈಮೀರುತ್ತಿರುವುದನ್ನು ಮನಗಂಡ ಸಚಿವ ಈಶ್ವರ್ ಖಂಡ್ರೆ ಅವರು, ಗಲಾಟೆಯನ್ನು ತಣ್ಣಗಾಗಿಸಲು ಯತ್ನಿಸಿದರು. ಆದರೆ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ಸಚಿವರು ಘೋಷಿಸಿದರು.

   ಇನ್ನು ಶಾಸಕ-ಎಂಎಲ್‌ಸಿ ನಡುವೆ ಜಗಳ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಮ್ನಾಬಾದ್​​ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ತಹಸೀಲ್ದಾರ್​​ ಅಂಜುಮ್ ತಬಸ್ಸುಮ್‌ ಆದೇಶಿಸಿದ್ದಾರೆ. 

Recent Articles

spot_img

Related Stories

Share via
Copy link