ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು

    ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲೇ ಹೊಗೆಯಿಂದ ಉಸಿರುಗಟ್ಟಿ ಮಹಿಳಾ ಟೆಕ್ಕಿ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರ್ಮಿಳಾ (34) ಮೃತ ದುರ್ದೈವಿ.

   ಶರ್ಮಿಳಾ ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ ವೇರ್  ಕಂಪನಿಯಲ್ಲಿ ಎಂಜಿನಿಯರ್ ಕೆಲಸ ಮಾಡ್ತಿದ್ದರು. ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಮೊನ್ನೆ ರಾತ್ರಿ 10.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದೆ. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

   ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್‌ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದರು. ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದ್ದಿದ್ದು ಕಂಡು ಬಂದಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಶರ್ಮಿಳಾರನ್ನು ದಾಖಲಿಸಿದ್ದರು. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ರು. 

    ಬೆಂಕಿ ಬಿದ್ದಿದ್ದ ಪರಿಣಾಮ ರೂಮಿನಿಂದ ಹೊರ ಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರುವ ಶಂಕೆ‌ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂದು ಪೊಲೀಸರು ಹುಡುಕುತ್ತಿದ್ದಾರೆ. ಶಾರ್ಟ್ ಸೆರ್ಕ್ಯೂಟ್, ಬೆಡ್ ಲ್ಯಾಂಪ್ ಅಥವಾ ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಂಡಿರಬಹುದಾ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯಿಂದ ರೂಮಿನ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ. ಸ್ಥಳಕ್ಕೆ ಸೋಕೋ ಟೀಮ್, ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Recent Articles

spot_img

Related Stories

Share via
Copy link