ಹೊಸ ವಿವಾದ ಎಬ್ಬಿಸಿದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ

ಬೆಂಗಳೂರು

     ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ ಆಳಿದ್ದ, ಪರಭಾಷೆಯಲ್ಲೂ ಮಿಂಚು ಹರಿಸಿದ್ದ ರಮ್ಯಾಗೂ  ವಿವಾದಕ್ಕೂ ಬಿಟ್ಟಿರಲಾರದ ನಂಟು. ಈ ಹಿಂದೆಯೂ ನೇರ ಮಾತು, ಬೋಲ್ಡ್‌ ಹೇಳಿಕೆಯ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರು ಬೀದಿನಾಯಿಗಳ ಪರ ಮಾತನಾಡುವ ಭರದಲ್ಲಿ ಪುರುಷ ಸಮೂಹವನ್ನು ಅವಮಾನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಬೀದಿ ನಾಯಿ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಉಲ್ಲೇಖಿಸಿದ ಅವರು ಪುರುಷರು ಯಾವಾಗ ಅತ್ಯಾಚಾರ ಎಸಗುತ್ತಾರೆ/ಕೊಲೆ ಮಾಡುತ್ತಾರೆ ಎನ್ನುವುದನ್ನು ಅವರ ಮನಸ್ಥಿತಿ ಓದಿ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಂತ ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೆ? ಎಂದು ಅವರು ಪ್ರಶ್ನಿಸಿದ್ದು ವಿವಾದಕ್ಕೆ ಕಾರಣವಾಗಿದೆ.

    ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಅವರು ತಮ್ಮ ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾಯಿಗಳ ಹಾವಳಿ ಬಗ್ಗೆ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದನ್ನು ಉಲ್ಲೇಖಿಸಿ ರಮ್ಯಾ ಈ ಹೇಳಿಕೆ ನೀಡಿದ್ದಾರೆ.

Ramya story

ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 6) ಬೀದಿ ನಾಯಿಗಳ ಪ್ರಕರಣದಲ್ಲಿ ಹಲವು ಮಧ್ಯಂತರ ಅರ್ಜಿಗಳನ್ನು ಆಲಿಸಿ, ಹೆದ್ದಾರಿಗಳಲ್ಲಿ ಪ್ರಾಣಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ಬೀದಿ ನಾಯಿಗಳ ಮನಸ್ಸನ್ನು ಯಾರಿಗೂ ಓದಲು ಸಾಧ್ಯವಿಲ್ಲ. ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ ಎಂದು ​ ಅಭಿಪ್ರಾಯಪಟ್ಟಿದ್ದರು. 

“ರಸ್ತೆಗಳು ನಾಯಿಗಳಿಲ್ಲದೆ ಸ್ವಚ್ಛವಾಗಿರಬೇಕು. ಅವು ಕಚ್ಚದೇ ಇರಬಹುದು, ಆದರೆ ಅವು ಅಪಘಾತಗಳಿಗೆ ಕಾರಣವಾಗುತ್ತವೆ. ಬೀದಿಗಳು, ಶಾಲೆಗಳು ಮತ್ತು ಸಾಂಸ್ಥಿಕ ಪ್ರದೇಶಗಳಲ್ಲಿ ನಮಗೆ ನಾಯಿಗಳು ಏಕೆ ಬೇಕು?” ಎಂದು ಪೀಠ ಪ್ರಶ್ನಿಸಿತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ, ಮೂಲತಃ ಶ್ವಾನಪ್ರಿಯೆ ರಮ್ಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಸದ್ಯ ಈ ಹೇಳಿಕೆ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ರಮ್ಯಾ ಪುರುಷರನ್ನು ಬೀದಿ ನಾಯಿಗೆ ಹೊಲೀಸಿದ್ದಾರೆ ಎಂದು ಒಂದಷ್ಟು ಮಂದಿ ಆರೋಪಿಸಿದ್ದಾರೆ. ರಮ್ಯಾ ಪ್ರಕಾರ ಯಾವ ಪುರುಷನೂ ಉತ್ತಮ ಗುಣ ಹೊಂದಿಲ್ಲವೆ? ಎಂದೆಲ್ಲ ಪ್ರಶ್ನಿಸುತ್ತಿದ್ದಾರೆ. ಹಿಂದಿನಿಂದಲೂ ರಮ್ಯಾ ಬೀದಿ ನಾಯಿಗಳ ಬಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ತನ್ನ ಬಗ್ಗೆ ಅಶ್ಲೀಲ ಕಮೆಂಟ್‌ ಮಾಡಿದ ದರ್ಶನ್‌ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ದಾಖಲಿಸುವ ಮೂಲಕ ಸದ್ದು ಮಾಡಿದ್ದರು. ತನ್ನಂತೆ ಬೇರೆ ಯಾವ ನಟಿಗೂ ಹೀಗೆ ಆಗಬಾರದೆಂದು ಈ ಕ್ರಮ ಕೈಗೊಂಡಿದ್ದಾಗಿ ಅವರು ತಿಳಿಸಿದ್ದರು. ಈ ನಡೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

Recent Articles

spot_img

Related Stories

Share via
Copy link