ಏಪ್ರಿಲ್ 15ರಂದು ಆದಿಚುಂಚನಗಿರಿ ಮಠಕ್ಕೆಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಬುಧವಾರ ಬೆಳಗ್ಗೆ ಆದಿಚುಂಚನಗಿರಿಗೆ ರಸ್ತೆ ಮೂಲಕ ಪ್ರಯಾಣಿಸಲಿದ್ದು, 11 ಗಂಟೆಗೆ ಹೊಸದಾಗಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ.

ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಠಕ್ಕೆ ತೆರಳಿ, ಬೆಳಗ್ಗೆ 11 ಗಂಟೆಗೆ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ ಅವರ ನೂತನ ಗದ್ದಿಗೆ (ಮಂದಿರ) ಉದ್ಘಾಟನೆ ನೆರವೇರಿಸಲಿದ್ದಾರೆ.

ನಂತರ BGS ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಮುಂದುವರಿಸಲಿದ್ದಾರೆ.

Recent Articles

spot_img

Related Stories

Share via
Copy link