ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆ ; ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ

18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ/ ವಿಸ್ತರಣಾ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ,ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link