ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು

ಕೋಲಾರ: ಕೋಲಾರದ ಅರಹಳ್ಳಿ ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತ ಮಹಿಳೆಯರನ್ನು ಮೊಹಮದಿ(25) ಮತ್ತು ಸಲ್ಮಾ(26) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳಾಗಿದ್ದು, ಸದ್ಯ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಮಕ್ಕಳು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಮೊಹಮದಿ ಮತ್ತು ಸಲ್ಮಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಇದ್ದ ಹಿನ್ನೆಲೆಯಲ್ಲಿ ಸಲ್ಮಾ ಅವರು ಬೆಂಗಳೂರಿಂದ ಬಂದಿದ್ದರು ಎನ್ನಲಾಗಿದೆ.

Recent Articles

spot_img

Related Stories

Share via
Copy link