5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಕಡ್ಡಾಯ

ಬೆಂಗಳೂರು: ರಾಜ್ಯದ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ವಯೋಮಿತಿಯೊಳಗಿನ ಎಲ್ಲಾ ಮಕ್ಕಳಿಗೆ ಸೆಪ್ಟೆಂಬರ್ 30, 2026ರವರೆಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಕಾಲಾವಕಾಶ ನೀಡಲಾಗಿದ್ದು, ರಾಜ್ಯದ ಎಲ್ಲಾ ಆಧಾರ್ ಸೇವಾ ಕೇಂದ್ರಗಳಲ್ಲಿ ಈ ಸೌಲಭ್ಯವನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬAಧಿತ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸರ್ಕಾರ ತಿಳಿಸಿದೆ.

ಅಪ್‌ಡೇಟ್ ಅಗತ್ಯ ಏಕೆ?

ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸುವುದರಿಂದ ಹಲವು ಸರ್ಕಾರಿ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಇದರಲ್ಲಿ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದು, ಸರ್ಕಾರದ ಯೋಜನೆಗಳ ಲಾಭ ಪಡೆಯುವುದು ಹಾಗೂ ವಿದ್ಯಾರ್ಥಿ ವೇತನ ಮತ್ತು ತರಬೇತಿ ಸೌಲಭ್ಯಗಳನ್ನು ಪಡೆಯುವುದು ಒಳಗೊಂಡಿದೆ.

ಜಿಲ್ಲೆಯ ಎಲ್ಲಾ ಪೋಷಕರು ಜವಾಬ್ದಾರಿಯಿಂದ ಈ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಇದೇ ವೇಳೆ, ಗ್ರಾಮ ಪಂಚಾಯತ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳ ಮೂಲಕ ಈ ವಿಷಯದ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Recent Articles

spot_img

Related Stories

Share via
Copy link