ವಿರುಧ್‌ನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ 18 ಜನರು ಸಜೀವ ದಹನ : ಛಿಧ್ರ – ಛಿಧ್ರ

ವಿರುಧ್‌ನಗರ(ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ 18 ಜನರು ಸಾವನ್ನಪ್ಪಿರುವ ಘಟನೆ ವಿರುಧ್‌ನಗರದ ಕಟ್ಟನಾರಪಟ್ಟಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

10 ಕಿ.ಮೀ ದೂರದವರೆಗೂ ಕಂಪನದ ಅನುಭವ!: ಸ್ಫೋಟದ ತೀವ್ರತೆಗೆ ಕಾರ್ಖಾನೆಯ 4 ಕೊಠಡಿಗಳು ಸಂಪೂರ್ಣವಾಗಿ ಛಿದ್ರಗೊಂಡಿವೆ. ಸುಮಾರು 10 ಕಿಲೋ ಮೀಟರ್ ದೂರದವರೆಗೂ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.

ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಎಕ್ಸ್ ಪೋಸ್ಟ್ ಮಾಡಿ, ‘ವಿರುಧ್‌ನಗರ ಜಿಲ್ಲೆಯ ಕಟ್ಟನಾರಪಟ್ಟಿಯಲ್ಲಿ ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ತಿಳಿದು ತುಂಬಾ ನೋವಾಯಿತು. ಮೃತರಿಗೆ ನನ್ನ ಸಂತಾಪಗಳು. ಸಚಿವರಾದ ರಾಮಚಂದ್ರನ್ ಮತ್ತು ತಂಗಮ್ ತೆನ್ನರಸು ಅವರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ಮತ್ತು ಮೇಲ್ವಿಚಾರಣೆ ನಡೆಸಲು ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸೂಚಿಸಿದ್ದೇನೆ. ಈ ವಿಷಯ ತಿಳಿದ ತಕ್ಷಣ, ನಾನು ಜಿಲ್ಲಾಧಿಕಾರಿಯ ಜೊತೆ ಮಾತನಾಡಿ, ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವಂತೆ ತಿಳಿಸಿದ್ದೇನೆ’ ಎಂದು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link