
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಆದ ಕಾರಣಕ್ಕೆ ನಾವು ಜಾಗೃತಿಗೆ ಮುಂದಾಗಿದ್ದೇವೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷಿ÷್ಮ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ. ಅದಕ್ಕೆ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ? ಎಂದರು.
ಮುಸ್ಲಿಮರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವ ತೀರ್ಮಾನದ ಬಗ್ಗೆ ಕೇಳಿದಾಗ, ?ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಜೊತೆಗೆ ರೈತರ ಮೇಲಿನ, ಕನ್ನಡ ಚಳುವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದು ಇದರಲ್ಲಿ ತಪ್ಪೇನಿಲ್ಲ? ಎಂದು ತಿಳಿಸಿದರು.








