ರಂಗೇರಿದ ವಿಪ ಚುನವಣೆ : ಕಸರತ್ತು

ಬೆಂಗಳೂರು : ರಾಜ್ಚ ವಿಧಾನಸಭೆಯಿಂದ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆ ರಂಗೇರಿದ್ದು, ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಜೆಡಿಎಸ್ 8ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ನಡುವೆ ಮತ್ತೊಂದು ಸಮರಕ್ಕೆ ವೇದಿಕೆ ಅಣಿಯಾಗಿದೆ.

ವಿಧಾನಪರಿಷತ್‌ನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಿಜೆಪಿ ತನ್ನ ಅಧಿಕೃತ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ,7ನೇ ಸ್ಥಾನಕ್ಕೆ ಈಗ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಏರ್ಪಟಿದ್ದು ಗೆಲುವು ಯಾರಿಗೆ ದಕ್ಕಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನ ನಾಲ್ವರು ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಇವರುಗಳೆಲ್ಲಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದರಾದರೂ ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿ ಕೆಪಿಸಿಸಿ ಖಂಜಾಚಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಆಪ್ತ ವಿನಯ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಲಾಗಿತ್ತು ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು

ಬಿಜೆಪಿಯಿಂದ ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಿದ್ದು, ಇವರಿಬ್ಬರುಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಈ ಮೊದಲು 8ನೇ ಅಭ್ಯರ್ಥಿಯನ್ನು ನಿಲ್ಲಿಸಲು ಆಷ್ಟೇನೂ ಆಸಕ್ತಿ ತೋರದಿದ್ದ ಜೆಡಿಎಸ್, ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಸುತ್ತಿದ್ದಂತೆಯ ಜೆಡಿಎಸ್‌ನಿಂದ 8ನೇ ಅಭ್ಯರ್ಥಿಯಾಗಿ ಮಾಜಿ ವಿಧಾನಪರಿಷತ್ ಸದಸ್ಯ ಗೋವಿಂದರಾಜು ನಾಮಪತ್ರ ಸಲ್ಲಿಸಿದರು. ಹಾಗಾಗಿ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಕಾರ್ತಿಕ್ ವಿನಯ್ ಹಾಗೂ ಗೋವಿಂದರಾಜು ನಡುವೆ ಗೆಲುವಿಗೆ ಪೈಪೋಟಿ ಇದ್ದು, ಎರಡೂ ಪಕ್ಷಗಳಿಗೂ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕೆಲವು ಮತಗಳ ಅವಶ್ಯಕತೆ ಇದ್ದು, ಇದನ್ನು ಹೇಗೆ ಕ್ರೂಢೀಕರಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನಿAದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ, ಹಾಗೂ ಮನ್ಸೂರ್ ಆಲಿಖಾನ್ ಇವರುಗಳು ತಮ್ಮ ನಾಮಪತ್ರ ಸಲ್ಲಿಸಿದ್ದು, ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಗಳಿವೆ.
ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್‌ನಿAದ ಮೂವರು, ಬಿಜೆಪಿಯಿಂದ ಒಬ್ಬರು ಹಾಗೂ ಪಕ್ಷೇತರದ ಅಭ್ಯರ್ಥಿ ಒಬ್ಬರು ನಾಮಪತ್ರ ಸಲ್ಲಿಸಿದ್ದರಾದರೂ ಪಕ್ಷೇತರ ಅಭ್ಯರ್ಥಿಗೆ ಶಾಸಕರ ಬೆಂಬಲ ಸಿಗದ ಕಾರಣ ಕಾಂಗ್ರೆಸ್‌ನ ಮಲ್ಲಿಕಾರ್ಜುನಖರ್ಗೆ, ಫವನ್ ಖೇರಾ, ಮನ್ಸೂರ್ ಆಲಿಖಾನ್ ಮತ್ತು ಬಿಜೆಪಿಯ ಎಂ. ನಾಗರಾಜು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತ.

ಹೆಚ್‌ಡಿಡಿಗೆ ಟಿಕೆಟ್ ನಿರಾಕರಣೆ, ಜೆಡಿಎಸ್‌ಗೆ ಅವಮಾನ : ಸುರ್ಜೇವಾಲಾ

ರಾಜ್ಯಸಭೆಗೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಯ್ಕೆ ಮಾಡಲು ನಿರಾಕರಿಸುವ ಮೂಲಕ ಬಿಜೆಪಿ, ಜೆಡಿಎಸ್‌ಗೆ ಅವಮಾನ ಮಾಡಿದ್ದರೂ ಕೇಂದ್ರ ಸಚಿವ ಸ್ಥಾನ ಉಳಿಸಿಕೊಳ್ಳುವ ಉದ್ದೇಶದಿಂದ ಜೆಡಿಎಸ್ ಇದನ್ನು ಸಹಿಸಿಕೊಂಡಿರುವುದು ಆಶ್ಚರ್ಯಕರ. ಈ ಅಪಮಾನವನ್ನು ಒಪ್ಪಿಕೊಳ್ಳುವುದು ರಾಜಕೀಯ ಶರಣಾಗತಿಯಾಗಿದೆ. ರಾಜ್ಯಸಭಾ ನಾಮ ನಿರ್ದೇಶನ ನಿರಾಕರಿಸಿ ಅವರ ಬದಲಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ. ನಾಗರಾಜ್ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಮತ್ತು ಅದರ ನಾಯಕತ್ವವು ಜೆಡಿಎಸ್‌ಗೆ ಪದೇ ಪದೇ ಮಾಡುತ್ತಿರುವ ಅವಮಾನವನ್ನು ಕೇವಲ ಯಾವುದೇ ಬೆಲೆಯಲ್ಲಾದರೂ ಸಚಿವ ಸ್ಥಾನ ಉಳಿಸಿಕೊಳ್ಳುವ ಉದ್ದಶೇಶದಿಂದ ಹೆಚ್.ಡಿ. ಕುಮಾರಸ್ವಾಮಿ ನಿರಂತರವಾಗಿ ಸಹಿಸಿಕೊಳ್ಳುತ್ತಿರುವುದು ಆಶ್ಚರ್ಯಕರವೂ ಕಣ್ಣ ತೆರೆಸುವಂತದ್ದಾಗಿದೆ. ಈ ಅವಮಾನವನ್ನು ಒಪ್ಪಿಕೊಳ್ಳುವುದು ರಾಜಕೀಯ ಶರಣಾಗತಿಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾಹಿತಿ ಹಂಚಿಕೊAಡಿದ್ದಾರೆ.

ಹಿರಿಯ ಜೀವದ ವಿಷಯದಲ್ಲಿ ರಾಜಕೀಯ ಬೇಡ : ಜೆಡಿಎಸ್

ರಾಜ್ಯಸಭಾ ಚುನಾವಣೆಯ ವಿಷಯವನ್ನಿಟ್ಟುಕೊಂಡು ಜೆಡಿಎಸ್ ವಿರುದ್ಧ ಟೀಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಕೇವಲ ವಸೂಲಿ ಮಾಡಿಕೊಂಡು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿರುವ ಸುರ್ಜೇವಾಲಾ ಉರುಫ್ ವಸೂಲಿವಾಲ ದೇವಗೌಡರ ವಿಷಯ ಬಿಟ್ಟು ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ನಡೆಯುತ್ತಿರುವ ಒಳ ಜಗಳ, ಒಳ ಸಂಚು ಹತ್ತಿಕ್ಕುವ ಕಡೆ ಗಮನಹರಿಸಲಿ. ಆ ಹಿರಿಯ ಜೀವದ ವಿಷಯದಲ್ಲಿ ರಾಜಕೀಯ ಮಾಡುವುದು ನಿಮ್ಮ ನೀಚತನ ಪರಾಕಾಷ್ಠೆ ಎಂದು ಜೆಡಿಎಸ್ ಕಿರಿಕಾಡಿದೆ.

ಚದುರಂಗದ ಆಟದ ಗುಟ್ಟು ಯಾರೂ ಹೇಳುವುದಿಲ್ಲ: ಸಿಎಂ

ಪರಿಷತ್ ಚುನಾವಣೆಯಲ್ಲಿ ವಿಧಾನ ಸೌಧದಲ್ಲಿ ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಡಿ.ಕೆ.ಶಿವಕುಮಾರ್, ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ಎಂದರು.

ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ , ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ ಅವರು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ. ಆದರೆ ನಾನು ಮಾತಾಡಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ” ಎಂದರು.

ಇಂಡಿಯಾ ಒಕ್ಕೂಟದಿಂದ ಮಹತ್ವದ ಸಭೆ

ಮುಂಬರುವ ಲೋಕಸಭಾ ಚುನಾವಣೆ ಹಾಗೂ ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ, ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಪ್ರಮುಖ ಕಾರ್ಯತಂತ್ರದ ಸಭೆಯು ಸೋಮವಾರ ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆಯಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸುವ ಕುರಿತು ತಂತ್ರಗಾರಿಕೆ ರೂಪಿಸಲು ಚರ್ಚೆ ನಡೆಸಲಾಯಿತು.

ಸಭೆಯ ಪ್ರಮುಖ ಕಾರ್ಯಸೂಚಿಗಳು

ಮೂಲಗಳ ಪ್ರಕಾರ, ಈ ಸಭೆಯಲ್ಲಿ ಒಕ್ಕೂಟದ ನಾಯಕರು ಮುಖ್ಯವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಎದುರಿಸುವುದು,ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ , ತೀವ್ರವಾಗಿ ಕಾಡುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಮತ್ತು ಕಷ್ಟದಲ್ಲಿರುವ ವಲಯ, ಎನ್‌ಡಿಎಯೇತರ ರಾಜ್ಯ ಸರ್ಕಾರಗಳ ಮೇಲಿನ ತಾರತಮ್ಯ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಚರ್ಚೆ ನಡೆಸಿದರು.

 

Recent Articles

spot_img

Related Stories

Share via
Copy link