ಸಾಮೂಹಿಕ ಅತ್ಯಾಚಾರ ಆರೋಪ : ದಾವಣಗೆರೆಯಲ್ಲಿ 10 ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಹೊರವಲಯದಲ್ಲಿ 41 ವರ್ಷದ ಮಹಿಳೆಯೊಬ್ಬರ ಮೇಲೆ ಯುವಕರ ಗುಂಪೊAದು ಸಾಮೂಹಿಕ ಅತ್ಯಾಚಾರ ಎಸಗಿದೆ. ಜೂನ್ 3ರಂದು ರಾತ್ರಿ ಘಟನೆ ನಡೆದಿದ್ದು, ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ಸಾಮೂಹಿಕ ಅತ್ಯಾಚಾರ, ಫೋಟೊ/ ವಿಡಿಯೊ ಚಿತ್ರೀಕರಣ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಬಸವಾಪಟ್ಟಣ ಠಾಣೆಯ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿ, ತನಿಖೆ ಚುರುಕುಗೊಳಿಸಿದ್ದಾರೆ.

ಚಟಾಕಿ ನಾಗರಾಜ, ಇಸ್ತಿçà ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ ಹಾಗೂ ಪ್ರದೀಪ ಬಂಧಿತರು. ಆರೋಪಿಗಳಿಂದ ಬೈಕ್ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ನಡೆಗೆ ಬೇಸರಗೊಂಡು ಮಹಿಳೆಯು ಗಂಡನಮನೆಯಿAದ ತವರು ಮನೆಗೆ ರಾತ್ರಿ ಒಬ್ಬರೇ ನಡೆದುಕೊಂಡು ಹೋಗುತ್ತಿದ್ದಾಗ ಕೃತ್ಯ ಎಸಗಲಾಗಿದೆ. ಆರೋಪಿಗಳ ಪೈಕಿ 20 ರಿಂದ 30 ವರ್ಷದ ವಯಸ್ಸಿನವರೇ ಹೆಚ್ಚಿನವರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನನಗೆ ತಿಳಿಯದಂತೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ನೀಡಿದ್ದ ಆರೋಪಿಗಳು ಊರಿಗೆ ಬಿಡುವುದಾಗಿ ಬೈಕ್‌ನಲ್ಲಿ ಹತ್ತಿಸಿಕೊಂಡಿದ್ದರು. ನಂತರ ಜಮೀನಿಗೆ ಕರೆದೊಯ್ದಿದ್ದರು. ಅಲ್ಲಿ ಮತ್ತಷ್ಟು ಯುವಕರೊಂದಿಗೆ ಸೇರಿ ಕೃತ್ಯ ಎಸಗಿದ್ದಾರೆ. ಎಚ್ಚರವಾದಾಗ ಮುಂಜಾನೆ ಊರಿಗೆ ತೆರಳಿದ್ದೆ? ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

ಬೆತ್ತಲೆ ಫೋಟೊ ಹಾಗೂ ವಿಡಿಯೊಗಳು ಮೊಬೈಲ್‌ಗಳಲ್ಲಿ ಹರಿದಾಡುತ್ತಿರುವುದು ಸಂತ್ರಸ್ತೆಯ ಕುಟುಂಬದವರ ಗಮನಕ್ಕೆ ಬಂದಾಗ ಸೋಮವಾರ ರಾತ್ರಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.

ಬಸವಾಪಟ್ಟಣ ಪೊಲೀಸ್ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಎಎಸ್‌ಪಿ ಪರಮೇಶ್ವರ ಹೆಗಡೆ, ಡಿವೈಎಸ್‌ಪಿ ರುದ್ರಪ್ಪ ಉಜ್ಜಿನಿಕೊಪ್ಪ ಭೇಟಿ ನೀಡಿ ಪರಿಶೀಲಿಸಿದರು.

Recent Articles

spot_img

Related Stories

Share via
Copy link