ಖಾತೆ ಬಿಕ್ಕಟ್ಟಿಗೆ ಶೀಘ್ರ ತೆರೆ : ದೆಹಲಿಯಲ್ಲಿ ವರಿಷ್ಠರ ಜತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಾಲೋಚನೆ

ಬೆಂಗಳೂರು : ರಾಜ್ಯ ಸಚಿವ ಸಂಪುಟದಲ್ಲಿನ ಖಾತೆ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜತೆ ಸಮಾಲೋಚನೆ ನಡೆಸಿದರು.

ನವದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗ್ಗೆ ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು, ಖಾತೆ ಹಂಚಿಕೆ ಬಿಕ್ಕಟ್ಟಿನ ಸಂಬAಧ ಹೈಕಮಾಂಡ್ ಜತೆ ಚರ್ಚೆ ನಡೆಸಿದರು.

ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಿ ಆವರ ರಾಜೀನಾಮೆ ನಿರ್ಧಾರ ವಾಪಸ್ ಪಡೆಯುವಂತೆ ಮಾಡುವಲ್ಲಿ ಡಿ.ಕೆ. ಶಿವಕುಮಾರ್ ಸಫಲರಾಗಿದ್ದರು. ಇದಾದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಣೆ ಹೊತ್ತಿದ್ದ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಬಿಡಿಎ ಮತ್ತು ಬಿಎಂಆರ್‌ಡಿಎ ಹೊರತುಪಡಿಸಿ ತಮಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡು ದೆಹಲಿಗೆ ತೆರಳಿ ವರಿಷ್ಠರಿಗೆ ಅಹವಾಲು ಸಲ್ಲಿಸಿದ್ದರು.

ಪ್ರಮುಖ ಇಲಾಖೆಗಳಾದ ಬಿಡಿಎ ಮತ್ತು ಬಿಎಂಆರ್‌ಡಿಎ ಬೆಂಗಳೂರು ನಗರಾಭಿವೃದ್ಧಿ ಜತೆ ಸೇರಿಸಿ ತಮಗೆ ಖಾತೆ ಹಂಚಿಕೆ ಮಾಡಿದರೆ ಮಾತ್ರ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ಕೃಷ್ಣಬೈರೇಗೌಡ ಅವರು ಪಟ್ಟು ಹಿಡಿದಿದ್ದಾರೆ.

ಬಿಎಂಆರ್‌ಡಿಎಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ದೆಗಹಲಿಗೆ ತೆರಳಿ ವರಿಷ್ಠರಿಗೆ ನಿನ್ನೆ ಅಹವಾಲು ಸಲ್ಲಿಸಿರುವ ಬೆನ್ನಲ್ಲೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ವರಿಷ್ಠರಿಗೆ ಎಲ್ಲವನ್ನು ಮನವರಿಕೆ ಮಾಡಿ ಖಾತೆ ಹಂಚಿಕೆ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವರು ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಹ ತಮ್ಮಖಾತೆ ಹಂಚಿಕೆ ಬಗ್ಗೆ ಅಮಸಾಧಾನಗೊಂಡಿದ್ದಾರೆ. ಹೀಗಾಗಿ ಖಾತೆ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವರಿಷ್ಠರ ಮೂಲಕವೇ ಸೂತ್ರ ಪ್ರಕಟಿಸುವರು ಎಂದು ಹೇಳಲಾಗಿದೆ.

ಸಂಪುಟ ವಿಸ್ತರಣೆ ಚರ್ಚೆ

ಕಾಂಗ್ರೆಸ್ ವರಿಷ್ಠರ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡನೇ ಹಂತದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದು ಉಳಿದ 20 ಸಚಿವ ಸ್ಥಾನದ ಭರ್ತಿ ಬಗ್ಗೆಯೂ ವರಿಷ್ಠರ ಜತೆ ಚರ್ಚೆ ನಡೆಸುವರು.

ಸಚಿವ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ 30 ಕ್ಕೂ ಹೆಚ್ಚು ಶಾಸಕರು ಪ್ರಬಲ ಆಕಾಂಕ್ಷಿಗಳಾಗಿದ್ದು ಸಂಪುಟ ವಿಸ್ತರಣೆ ತಲೆ ನೋವಾಗಿದೆ. ಹಾಗಾಗಿ ಆದಷ್ಟು ಬೇಗ ಸಂಪುಟ ವಿಸ್ತರಿಸುವ ಸಂಬAಧ ಡಿ.ಕೆ. ಶಿವಕುಮಾರ್ ವರಿಷ್ಠರ ಜತೆ ಚರ್ಚಿಸಿ, ಈ ತಿಂಗಳ ಅಂತ್ಯಕ್ಕೆ ಎರಡನೇ ಹಂತದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಎರಡನೇ ಹಂತದ ಸಂಪುಟ ವಿಸ್ತರಣೆ ಸಂಬAಧ ಡಿ.ಕೆ. ಶಿವಕುಮಾರ್ ಇಂದು ವರಿಷ್ಠರ ಜತೆ ಚರ್ಚಿಸಿದ ನಂತರ ಈ ತಿಂಗಳ 21 ರ ನಂತರ ಸಿದ್ಧರಾಮಯ್ಯ ಅವರ ಜತೆ ದೆಹಲಿಗೆ ತೆರಳಿ 2ನೇ ಹಂತದ ಸಂಪುಟ ವಿಸ್ತರಣೆ ಸಂಬAಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಸಚಿವರ ಪಟ್ಟಿಯನ್ನು ಅಂತಿಮ ಮಾಡುವರು ಎಂದು ಹೇಳಲಾಗಿದೆ.

ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ದೆಹಲಿಯಲ್ಲಿ ಎಲ್ಲ ಹಿರಿಯ ಐಎಎಸ್, ಐಪಿಎಸ್ ಆಫೀಸರ್‌ಗಳ ಔತಣಕೂಟದಲ್ಲಿ ಭಾಗಿಯಾಗುವರು. ನಾಳೆ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುವರು.

ಸಚಿವಾಕಾಂಕ್ಷಿಗಳ ದಂಡು ದೆಹಲಿಗೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ವರಿಷ್ಠರ ಜತೆ ಇಂದು ಚರ್ಚೆ ನಡೆಸುವ ಸುಳಿವು ಹಿಡಿದಿರುವ ಸಚಿವಾಕಾಂಕ್ಷಿ ಶಾಸಕರುಗಳ ದಂಡು ದೆಹಲಿಯಲ್ಲಿ ಮೊಕ್ಕಾಂ ಹೂಡಿದೆ.

ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗುತ್ತಿರುವ ಮಾಹಿತಿ ತಿಳಿದ ಸುಮಾರು 15ಕ್ಕೂ ಹೆಚ್ಚು ಶಾಸಕರು ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, 2ನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಗಿಟ್ಟಿಸಲು ಲಾಬಿ ನಡೆಸಿದ್ದಾರೆ.

ಎಐಸಿಸಿ ಮಟ್ಟದಲ್ಲಿ ತಮ್ಮ ಗಾಡ್ ಫಾದರ್‌ಗಳ ಮೂಲಕ ಕೆಲವು ಶಾಸಕರು ಸಚಿವ ಸ್ಥಾನಕ್ಕೆ ಒತ್ತಡ ಹೇರುವ ತಂತ್ರವನ್ನು ನಡೆಸಿದ್ದಾರೆ. ಹಲವು ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಸುರ್ಜೇವಾಲ ರವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಮನವಿ ಮಾಡಿದ್ದಾರೆ.

ಈ ತಿಂಗಳಾAತ್ಯದೊಳಗೆ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ಇದೆ. ಹೈಕಮಾಂಡ್ 2ನೇ ಹಂತದ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪ್ರಾದೇಶಿಕವಾರು, ಜಾತಿವಾರು ಎಲ್ಲಾ ಲೆಕ್ಕಾಚಾರಗಳನ್ನು ಗಮನದಲ್ಲಿಟ್ಟುಕೊಂಡೆ ಸಂಪುಟದಲ್ಲಿ ಶಾಸಕರುಗಳಿಗೆ ಸ್ಥಾನ ನೀಡಲಿದೆ ಎಂದು ಹೇಳಲಾಗಿದೆ.

ಫೋಟೋ : ಸಿಎಂ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠ ನಾಯಕಿ ಶ್ರೀಮತಿ ಸೋನಿಯಾಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ನವದೆಹಲಿಯ 10, ಜನಪತ್ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ಧನ್ಯವಾದ ಹೇಳಿದರು. ಸಮಾಲೋಚನೆ ನಡೆಸಿದರು.

 

Recent Articles

spot_img

Related Stories

Share via
Copy link