
ನವದೆಹಲಿ / ಬೆಂಗಳೂರು: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಬೇಕು. ಹಾಗೂ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ – ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿದ ಸಿಎಂ, ನೀರಾವರಿ ಯೋಜನೆಗಳ ಜಾರಿಗೆ ಸಹಕಾರ ಕೋರಿದರು.
ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್ ೧೩.೧೧.೨೦೨೫ರಂದು ತಮಿಳುನಾಡು ರಾಜ್ಯದ ವಿವಿಧ ಅರ್ಜಿಗಳನ್ನು ವಜಾಗೊಳಿಸಿ, ಮೇಕೆದಾಟು ಯೋಜನೆಯ ಅನುಮತಿಯ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗ (ಅWಅ) ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. ಅWಒಂ ಈಗಾಗಲೇ ಯೋಜನೆಯನ್ನು ಮೌಲ್ಯಮಾಪನ ಮಾಡಲು ಅWಅಗೆ ಸೂಚಿಸಿರುವುದರಿಂದ, ಈ ಯೋಜನೆಗೆ ಶೀಘ್ರ ಅನುಮತಿ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕೃಷ್ಣಾ ನೀರು ವಿವಾದ: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬAಧಿಸಿದAತೆ, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪು ನೀಡಿ ಒಂದು ದಶಕಕ್ಕೂ ಹೆಚ್ಚು ಕಾಲ ಕಳೆದಿದ್ದರೂ, ಕೇಂದ್ರ ಸರ್ಕಾರವು ಇನ್ನೂ ಸಹ ಈ ತೀರ್ಪನ್ನು ಗೆಜೆಟ್ನಲ್ಲಿ ಅಧಿಸೂಚಿಸಿಲ್ಲ. ಕರ್ನಾಟಕ ರಾಜ್ಯವು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-IIIರ ಅನುಷ್ಠಾನದಲ್ಲಿ ಭಾರಿ ಮೊತ್ತವನ್ನು ಹೂಡಿಕೆ ಮಾಡಿದೆ. ನಮ್ಮ ಯೋಜನೆಯನ್ನು ಮುಂದುವರೆಸಲು ಹಾಗೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರದ ಬೆಂಬಲದ ಅಗತ್ಯವಿದೆ ಎಂದು ಸಿಎಂ ಕೋರಿದರು.
ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ೨೦೨೩-೨೪ರ ಕೇಂದ್ರ ಬಜೆಟ್ನಲ್ಲಿ ೫,೩೦೦ ಕೋಟಿ ರೂ.ಗಳ ನೆರವನ್ನು ಘೋಷಿಸಿತ್ತು. ಆದರೆ, ೩ ವರ್ಷಗಳು ಕಳೆದರೂ ರಾಜ್ಯಕ್ಕೆ ಈ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲ. ಈ ಯೋಜನೆಯ ೨೧,೧೬೭.೯೩ ಕೋಟಿ ರೂ.ಗಳ ಪರಿಷ್ಕöÈತ ವೆಚ್ಚದ ಅಂದಾಜಿನ ಪ್ರಸ್ತುತ ಪ್ರಸ್ತಾವನೆಯನ್ನು ಮೌಲ್ಯಮಾಪನ ಮಾಡಿದೆ. PಒಏSಙ-ಂIಃP ಯೋಜನೆಯಡಿ ಈ ಯೋಜನೆಗೆ ಕೇಂದ್ರದ ನೆರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಕಳಸಾ ಬಂಡೂರಿ ಯೋಜನೆ: ಮಹದಾಯಿ ಕಣಿವೆಯಡಿ ಬರುವ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳನ್ನು ಹುಬ್ಬಳ್ಳಿ- ಧಾರವಾಡದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಉದ್ದೇಶಿಸಲಾಗಿದೆ. ಇವುಗಳಿಗೆ ಡಿಸೆಂಬರ್ ೨೦೨೨ರಲ್ಲಿ ಅWಅ/ಜಲಶಕ್ತಿ ಸಚಿವಾಲಯವು ಅನುಮತಿ ನೀಡಿದ್ದರೂ, ಈ ಯೋಜನೆಗೆ ಯಾವುದೇ ಕಾನೂನು ಅಡಚಣೆಗಳಿಲ್ಲದಿದ್ದರೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (ಒoಇಈ & ಅಅ) ಅರಣ್ಯ/ವನ್ಯಜೀವಿ ಅನುಮತಿ ಇನ್ನೂ ಸಿಕ್ಕಿಲ್ಲ. ಇದರಿಂದಾಗಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ತೀರ್ಪಿನ ಅನ್ವಯ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆದಷ್ಟು ಬೇಗ ಈ ಯೋಜನೆಗಳಿಗೆ ಅನುಮತಿ ಕೊಡಿಸಬೇಕು ಎಂದು ಕೋರಿದರು.
ಏತ ನೀರಾವರಿ, ಕಾಲುವೆ ಕಾಮಗಾರಿ: ಭಾರತ ಸರ್ಕಾರದ ಂIಃP-PಒಏSಙ ಮತ್ತು ಈಒಃಂP ಯೋಜನೆಗಳಡಿ ಕೇಂದ್ರದ ನೆರವು ಕೋರಿ ಕರ್ನಾಟಕ ರಾಜ್ಯವು ಫೆಬ್ರವರಿ ೨೦೨೫ರಲ್ಲಿ ಈ ಕೆಳಗಿನ ಯೋಜನೆಗಳ Pಈಖ/ಆPಖಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.
ಸೊಂತಿ ಏತ ನೀರಾವರಿ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಬಾಕಿ ಕಾಮಗಾರಿ, ಬೆಣ್ಣಿಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ಪ್ರವಾಹ ನಿರ್ವಹಣೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಮನವಿ ಮಾಡಿದರು.
ನದಿ ಜೋಡಣೆ ಯೋಜನೆ: ಕೇಂದ್ರ ಸರ್ಕಾರದ ನದಿಗಳ ಜೋಡಣೆಯ ಪ್ರಸ್ತಾವನೆಗಳ ಅಡಿಯಲ್ಲಿ, ನದಿ ಜೋಡಣೆ (Iಐಖ) ಯೋಜನೆಗಳಿಂದ “ಸಮತೆ ಮತ್ತು ಸಮಾನ ಹಂಚಿಕೆಯ ತತ್ವದ” ಮೇಲೆ ಕರ್ನಾಟಕ ರಾಜ್ಯಕ್ಕೆ ನ್ಯಾಯಸಮ್ಮತವಾದ ಪಾಲನ್ನು ಹಂಚಿಕೆ ಮಾಡಬೇಕು ಎಂದು ಸಿಎಂ ಡಿಕೆಶಿ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಪೊಲೀಸ್ಗೆ ‘ಪ್ರೆಸಿಡೆಂಟ್ಸ್ ಕಲರ್’ (ರಾಷ್ಟçಪತಿಗಳ ಅತ್ಯುನ್ನತ ಗೌರವ) ಪ್ರಶಸ್ತಿ
ಕರ್ನಾಟಕ ರಾಜ್ಯ ಪೊಲೀಸ್ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿಯನ್ನು ನೀಡುವ ಕುರಿತಾದ ಪ್ರಸ್ತಾವನೆಯನ್ನು ೦೮-೦೫-೨೦೨೪ ರಂದು ಭಾರತ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತುತ ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಸಹ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು.
ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (Iಖಃs) ಸೃಷ್ಟಿ:
ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ಹೆಚ್ಚುವರಿ ಐಆರ್ಬಿ (Iಖಃ) ಬೆಟಾಲಿಯನ್ಗಳನ್ನು ಸ್ಥಾಪಿಸಲು ಅಂದಾಜು ೨೪೩.೮೭ ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನು ಪತ್ರ ಸಂಖ್ಯೆ ಊಆ/೧೩೩/PಔP/೨೦೨೪ ದಿನಾಂಕ ೦೪-೦೨-೨೦೨೫ ರ ಮೂಲಕ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಇದಕ್ಕೆ ಶೀಘ್ರವಾಗಿ ಮಂಜೂರಾತಿ ನೀಡಬೇಕೆಂದು ನಾನು ವಿನಂತಿಸುತ್ತೇನೆ.
ಪೊಲೀಸ್ ವ್ಯವಸ್ಥೆ ಆಧುನೀಕರಣಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು (ಂSUಒP) ? ೨೦೨೫-೨೬:
ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ಗಳು ಹಾಗೂ ಸಂವಹನ ಉಪಕರಣಗಳ ಸ್ಥಾಪನೆಗಾಗಿ ಂSUಒP ಯೋಜನೆಯಡಿ ೨೮೦.೦೦ ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಮಂಜೂರಾತಿ ನೀಡಬೇಕು.
ಕಂಪನಿಗಳ ಕಾಯ್ದೆ, ೨೦೧೩ ರ ಶೆಡ್ಯೂಲ್ ಗಿII ರ ಅಡಿಯಲ್ಲಿ ಪೊಲೀಸ್ ಸಂಬAಧಿತ ಚಟುವಟಿಕೆಗಳ ಸೇರ್ಪಡೆ (ಅSಖ):
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ನಿಧಿಯನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕಂಪನಿಗಳ ಕಾಯ್ದೆ, ೨೦೧೩ ರ ಶೆಡ್ಯೂಲ್ ಗಿII ರ ಅಡಿಯಲ್ಲಿ ಪೊಲೀಸ್ ಸಂಬAಧಿತ ಚಟುವಟಿಕೆಗಳನ್ನು ಸೇರಿಸುವ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಶೀಘ್ರವಾಗಿ ಅನುಮೋದನೆ ನೀಡಬೇಕು.
ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ:
ಃPಖ&ಆ ಯ ಗ್ಯಾಪ್ ಅನಾಲಿಸಿಸ್ (ಉಂP ಂಟಿಚಿಟಥಿsis) ಮಾರ್ಗಸೂಚಿಗಳ ಪ್ರಕಾರ ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲು ೨೫೮.೫೩ ಕೋಟಿ ರೂ.ಗಳ ವಿವರವಾದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ನಿಮ್ಮ ಅನುಮೋದನೆ ಕೋರುತ್ತೇನೆ.
ಕಾರಾಗೃಹಗಳ (ಜೈಲುಗಳ) ಆಧುನೀಕರಣ:
ಕಾರಾಗೃಹಗಳ ಆಧುನೀಕರಣ ಯೋಜನೆಯಡಿ ೨೦೨೫-೨೬ ರ ಆರ್ಥಿಕ ವರ್ಷಕ್ಕೆ (ಸಿಸಿಟಿವಿ, ವಾಕಿ-ಟಾಕಿ ಮತ್ತು ಇತರ ಭದ್ರತಾ ಉಪಕರಣಗಳ ಖರೀದಿಗೆ) ೨೦ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಮೊತ್ತವನ್ನು ಶೀಘ್ರ ಮಂಜೂರು ಮಾಡಬೇಕು.
ಕೇಂದ್ರ ಮೋಟಾರು ವಾಹನಗಳ ನಿಯಮಗಳು, ೧೯೮೯ ರ ನಿಯಮ ೫೨-ಂ ಅನುಷ್ಠಾನದ ಗಡುವು ವಿಸ್ತರಣೆ:
ಕರ್ನಾಟಕದಲ್ಲಿ ನಿಯಮ ೫೨ – ಎ ಅನ್ನು ಅನುಷ್ಠಾನಗೊಳಿಸಲು ಗಡುವನ್ನು ವಿಸ್ತರಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ದಯವಿಟ್ಟು ತಾವು ಈ ವಿಷಯವನ್ನು ಸಂಬAಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಆದಷ್ಟು ಬೇಗ ಅನುಮೋದನೆ ಕೊಡಿಸಬೇಕು.
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೇಲ್ದರ್ಜೀಕರಣ
ಗೌರವಾನ್ವಿತ ಭಾರತದ ಸುಪ್ರೀಂ ಕೋರ್ಟ್ ಮುಂದೆ ನಡೆದ ಚರ್ಚೆಗಳ ಅನುಸಾರ, ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು ಂSUಒP ಅಡಿಯಲ್ಲಿ ೨೭೮.೨೬ ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಪರಿಗಣಿಸಬೇಕು.
ಕರ್ನಾಟಕ ಸೈಬರ್ ಕ್ರೆöÊಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ ಸ್ಥಾಪನೆ
ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟಿçÃಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ. ಇವುಗಳನ್ನು ನಿಗ್ರಹಿಸಲು ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆ ಅಗತ್ಯವಿದ್ದು, ಕರ್ನಾಟಕ ಸರ್ಕಾರವು ಅಂದಾಜು ೩೬೦ ಕೋಟಿ ರೂ.ಗಳ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೆöÊಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್’ (ಏ೪ಅ) ಅನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರ ವಿವರವಾದ ಯೋಜನಾ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಉಪಕ್ರಮವನ್ನು ದಯವಿಟ್ಟು ಪರಿಗಣಿಸಿ, ಯೋಜನೆಗೆ ಅನುಮೋದನೆ ನೀಡಬೇಕು.
ಫೋಟೋ : ೧.೧
ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.
ಫೋಟೋ : ೧.೨
ಸಿಎಂ ಡಿ ಕೆ ಶಿವಕುಮಾರ್ ಅವರು ಕರ್ನಾಟಕ ಸರಕಾರದ ಬೇಡಿಕೆಗಳ ಕುರಿತು ಕೇಂದ್ರ ಜಲ ಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ದೆಹಲಿಯ ಅವರ ನಿವಾಸದಲ್ಲಿ ಪತ್ರ ಸಲ್ಲಿಸಿ, ಸಮಾಲೋಚನೆ ನಡೆಸಿದರು.
ಫೋಟೋ : ೧.೩,೪
ಸಿಎಂ ಡಿ ಕೆ ಶಿವಕುಮಾರ್ ಅವರು ರಾಷ್ಟçಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟçಪತಿ ಸಿ. ಪಿ. ರಾಧಾಕೃಷ್ಣನ್ ಅವರನ್ನು ಸೌಜನ್ಯದ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.








