
ಬೆಂಗಳೂರು: ಅಗತ್ಯ ದಾಖಲಾತಿಯಿಲ್ಲದೆ ರಾಜ್ಯದ ಗಡಿ ಚೆಕ್ ಪೋಸ್ಟ್ಗಳಲ್ಲಿ ಯಾವುದೇ ರೀತಿಯ ಸರಕು ಸಾಗಣೆ ವಾಹನಗಳು ದಾಟಬಾರದು. ತೆರಿಗೆ ಸೋರಿಕೆ ಹಾಗೂ ವಂಚನೆಗೆ ಅವಕಾಶ ಕಲ್ಪಿಸಬಾರದು. ಇಲಾಖೆಯ ಬಳಿ ಇರುವ 12 ಲಕ್ಷ ತೆರಿಗೆದಾರರ ಮಾಹಿತಿಯನ್ನು ತಂತ್ರಜ್ಞಾನ ಮತ್ತು ‘ಡೇಟಾ ಅನಾಲಿಟಿಕ್ಸ್’ ಮೂಲಕ 360 ಡಿಗ್ರಿ ದೃಷ್ಟಿಕೋನದಲ್ಲಿ ವಿಶ್ಲೇಷಿಸಿ, ಗುರಿ ಮೀರಿದ ಸಾಧನೆ ಮಾಡಬೇಕು. ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ÷್ಯ ಕಂಡುಬAದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸರಕು ಸಾಗಣೆ ವಾಹನ ಸೂಕ್ತ ಲೆಕ್ಕಪತ್ರ, ದಾಖಲೆಯಿಲ್ಲದೆ ರಾಜ್ಯದ ಗಡಿ ದಾಟಬಾರದು. ಇದು ವಾಣಿಜ್ಯ ಇಲಾಖೆಯ ಕಾರ್ಯವೈಖರಿಯ ಮೂಲ ತತ್ವವಾಗಬೇಕು. ಗಡಿ ಜಿಲ್ಲೆಗಳಿಂದ ರಾಜ್ಯದ ಎಲ್ಲ ಭಾಗಗಳಲ್ಲೂ ನನ್ನದೇ ಆದ ಸಂಪರ್ಕಗಳಿವೆ. ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಯಾವುದೇ ಲೋಪವೆಸಗುವುದು ಕಂಡುಬAದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿ ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. ರಾಜ್ಯದಲ್ಲಿ ಸುಮಾರು 12 ಲಕ್ಷ ತೆರಿಗೆದಾರರ ಮಾಹಿತಿಯಿದೆ. ತಂತ್ರಜ್ಞಾನ ಮತ್ತು ದತ್ತಾಂಶ ವಿಶ್ಲೇಷಣೆ ಮೂಲಕ ಅವರನ್ನು ತೆರಿಗೆ ವ್ಯಾಪ್ತಿಗೆ ತಂದು ಗುರಿಯನ್ನು ಸಾಧಿಸುವುದಷ್ಟೇ ಅಲ್ಲ, ಅದನ್ನು ಮೀರಿಸುವ ಸಾಮರ್ಥ್ಯವೂ ನಿಮ್ಮಿಂದ ಸಾಧ್ಯವಿದೆ ಎಂದು ಹೇಳಿದರು.
ನಮ್ಮ ಉದ್ದೇಶ ಯಾರಿಗೂ ಅನಗತ್ಯ ತೊಂದರೆ ನೀಡುವುದಲ್ಲ. ಪ್ರಾಮಾಣಿಕ ತೆರಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ತೆರಿಗೆ ಪಾವತಿಸುವ ಪ್ರತಿಯೊಬ್ಬ ನಾಗರಿಕನನ್ನೂ ಘನತೆ ಮತ್ತು ಗೌರವದಿಂದ ನಡೆಸಿಕೊಳ್ಳಬೇಕು. ಕಾನೂನು ಮೀರಿ, ಶೋಷಣೆ ಮಾಡಿ ಅಂತ ಹೇಳಲ್ಲ. ತೆರಿಗೆ ವಂಚನೆ ಹಾಗೂ ಸೋರಿಕೆಗೆ ಯಾವುದೇ ಅವಕಾಶ ಇರಕೂಡದು ಎಂದು ಸ್ಪಷ್ಟಪಡಿಸಿದರು.
ಪ್ರಾಮಾಣಿಕ ತೆರಿಗೆದಾರರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅವರಿಂದ ಸುಲಿಗೆ ಮಾಡಬಾರದು. ಜಿಎಸ್??ಟಿ ಸಂಗ್ರಹದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ. ಶೇ.9ರಷ್ಟು ಪ್ರಗತಿಯಾಗಿದೆ. ಈ ಪ್ರಮಾಣ ರಾಷ್ಟಿçÃಯ ಸರಾಸರಿಗಿಂತ ಉತ್ತಮ ಸಾಧನೆಯಾಗಿದೆ. ಗುಜರಾತ್, ತಮಿಳುನಾಡು, ಹರಿಯಾಣ ರಾಜ್ಯಗಳಿಗಿಂತ ಹೆಚ್ಚು ಪ್ರಗತಿ ರಾಜ್ಯದಲ್ಲಿ ಆಗಿರುವುದು ಸಮಾಧಾನದ ಸಂಗತಿ. ಹೈದರಾಬಾದ್ ಐಐಟಿ ಸಹಯೋಗದಲ್ಲಿ ಜಿಎಸ್‌ಟಿ ವಂಚನೆ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಹೇಳಿದರು.
ನಕಲಿ ರಶೀದಿ ಮತ್ತು ನಕಲಿ ಇನ್ ವಾಯ್ಸ್ಗಳು ದೊಡ್ಡ ಸವಾಲಾಗಿದೆ. ಈ ಸವಾಲನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇವೆ. ಬೋಗಸ್ ಕಂಪನಿಗಳನ್ನು ಪತ್ತೆ ಹಚ್ಚಿ 166 ಕೋಟಿ ರೂ ಸಂಗ್ರಹಿಸಿದ್ದೇವೆ. ಬೋಗಸ್ ಕಂಪನಿ ಸ್ಥಾಪಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಮಾಣ ಹೆಚ್ಚಿಸುವಂತೆ ಸಿಎಂ ತಿಳಿಸಿದರು.
ಐಐಟಿ ಹೈದರಾಬಾದ್ ಸಹಯೋಗ: ಹೈದರಾಬಾದ್ ಐಐಟಿ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ‘ಉSಖಿ ಂಟಿಚಿಟಥಿಣiಛಿಚಿಟ Poಡಿಣಚಿಟ’ ಮೂಲಕ ತೆರಿಗೆ ವಂಚನೆ ಮೇಲೆ ತೀವ್ರ ನಿಗಾ ಇಡಲಾಗಿದೆ.
ಪ್ರಾಮಾಣಿಕ ತೆರಿಗೆದಾರರಿಗೆ ರಕ್ಷಣೆ
ನಾಗರಿಕ ಸ್ನೇಹಿ ಆಡಳಿತ: ತೆರಿಗೆ ವಸೂಲಾತಿ ನೆಪದಲ್ಲಿ ಶೋಷಣೆ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ. ಪ್ರಾಮಾಣಿಕ ತೆರಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರಿಗೆ ಗೌರವಯುತವಾಗಿ ನಡೆಸಿಕೊಳ್ಳಬೇಕು.
ಆನ್‌ಲೈನ್ ಪರಿಹಾರ: ತೆರಿಗೆದಾರರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಅವರ ಗೊಂದಲಗಳನ್ನು ತ್ವರಿತವಾಗಿ ಆನ್‌ಲೈನ್‌ನಲ್ಲೇ ಬಗೆಹರಿಸುವ ಸಮಗ್ರ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಅಬಕಾರಿ ಇಲಾಖೆ ಆಯುಕ್ತ ವೆಂಕಟೇಶ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಎಸ್‌ಟಿ ಸಂಗ್ರಹ: ದೇಶದಲ್ಲೇ ರಾಜ್ಯಕ್ಕೆ 2ನೇ ಸ್ಥಾನ
ಮೇ 2026ರ ವರೆಗಿನ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ಶೇ. 9ರಷ್ಟು ಪ್ರಗತಿ ಸಾಧಿಸಿದ್ದು, ಇದು ರಾಷ್ಟಿçÃಯ ಸರಾಸರಿಗಿಂತ ಉತ್ತಮವಾಗಿದೆ. ತೆಲಂಗಾಣ (ಶೇ. 10) ಬಿಟ್ಟರೆ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಗುಜರಾತ್ (ಶೇ. 5), ಮಹಾರಾಷ್ಟç (ಶೇ. 5) ಹಾಗೂ ತಮಿಳುನಾಡು (ಶೇ. -7) ರಾಜ್ಯಗಳಿಗಿಂತ ನಮ್ಮ ರಾಜ್ಯವು ಉತ್ತಮ ಸಾಧನೆ ಮಾಡಿದೆ. ತೆರಿಗೆ ಸಂಗ್ರಹ ಗುರಿ ತಲುಪುವಲ್ಲಿ ಮೈಸೂರು ವಿಭಾಗದ ಕಾರ್ಯಕ್ಷಮತೆ ಕುಸಿದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, “ನೆಪಗಳನ್ನು ಹೇಳುವುದು ಬೇಡ, ನಮಗೆ ಫಲಿತಾಂಶ ಮುಖ್ಯ” ಎಂದು ಎಚ್ಚರಿಸಿದರು. ಅಲ್ಲದೆ, ಬಾಕಿ ಇರುವ ಮೇಲ್ಮನವಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಂಬರುವ ದಿನಗಳಲ್ಲಿ ಮೊದಲ ಸ್ಥಾನಕ್ಕೇರಲು ಅಗತ್ಯ ಮಾರ್ಗಗಳನ್ನು ಶೋಧಿಸುವಂತೆ ಸಿಎಂ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನಕಲಿ ರಶೀದಿ ಜಾಲ ಬೇಧನೆ:
ನಕಲಿ ರಶೀದಿ ಮತ್ತು ಬೋಗಸ್ ಕಂಪನಿಗಳನ್ನು ಸೃಷ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಇಂತಹ ಕಂಪನಿಗಳಿAದ 166 ಕೋಟಿ ರೂ. ಸಂಗ್ರಹಿಸಲಾಗಿದೆ. ವಂಚಕರ ಬಂಧನ ಪ್ರಕ್ರಿಯೆಯನ್ನೂ ಚುರುಕುಗೊಳಿಸಲಾಗಿದೆ.








