ಸರ್ವಜನಾಂಗದ ನಾಯಕ ಕೆಂಪೇಗೌಡ : ಜಿಕೆವಿಕೆ, ಎಂಜಿನಿಯರ್ ವಿಶ್ವನಾಥ್, ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಕೆಂಪೇಗೌಡ ಪ್ರಶಸ್ತಿ

 

ಬೆಂಗಳೂರು: ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ದಾಖಲೆಯುತ ೧೫ ಲಕ್ಷ ಸಸಿಗಳ ನೆಡುವಿಕೆ, ಎಸ್.ಎಂ.ಕೃಷ್ಣ ದಶಪಥ ರಸ್ತೆ, ೧೦ ಕೆ ರನ್, ೫ ಕೆ ವಾಕಥಾನ್, ಅಂತರರಾಷ್ಟಿಯ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳ ಮೂಲಕ ೫೧೭ ನೇ ವರ್ಷದ ಕೆಂಪೇಗೌಡ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕೇವಲ ವಿಧಾನಸೌಧ ಹೊರತಾಗಿ, ಬೆಂಗಳೂರಿನ ೨೮ ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ ೨೮ ವರ್ಷಗಳ ಕಾಲ ಒಂದೊAದು ಕ್ಷೇತ್ರದಲ್ಲಿ ರಾಜ್ಯಮಟ್ಟದ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಮುಂದಿನ ಸಾವಿರಾರು ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಕೋಟ್ಯಂತರ ಉದ್ಯೋಗ ಸೃಷ್ಟಿ ಹಾಗೂ ಜನರಿಗೆ ಜೀವನ ಕಟ್ಟಿಕೊಳ್ಳುವಂತೆ ಅಂದಿನ ಬೆಂದಕಾಳೂರು(ಬೆAಗಳೂರು) ಅನ್ನು ವ್ಯವಸ್ಥಿತವಾಗಿ ನಿರ್ಮಿಸಿದ ದೂರದೃಷ್ಟಿಯ ಮಹಾಚೇತನ ಕೆಂಪೇಗೌಡರು ಎಂದು ಸಿಎಂ ನಾಡಪ್ರಭು ಕೆಂಪೇಗೌಡರನ್ನು ಬಣ್ಣಿಸಿದರು.

ಕೆಂಪೇಗೌಡರ ಚಿಂತನೆ, ಆಚಾರ, ವಿಚಾರ ಎಲ್ಲವನ್ನು ಗಮನಲ್ಲಿಟ್ಟುಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಓಟ, ಬೆಂಗಳೂರಿನಲ್ಲಿ ೧೫ ಲಕ್ಷ ಸಸಿ ನೆಡುವ ಕಾರ್ಯಕ್ರಮ, ಮಾಗಡಿಯಲ್ಲಿ ೧೦೦ ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ ೧೦ ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ? ಎಂದು ಮಾಹಿತಿ ನೀಡಿದರು.

ಬೃಹತ್ ಪ್ರತಿಮೆಯ ಪಾದವನ್ನು ಮುಟ್ಟಿ ನಮಸ್ಕಿರಿಸಿದ ಮುಖ್ಯಮಂತ್ರಿಯವರು ಪ್ರತಿಮೆಯ ಪಾದಗಳಿಗೆ ಭಕ್ತಿಯಿಂದ ಪುಷ್ಪಾರ್ಚನೆ ಮಾಡಿ ನಮಿಸಿದರು. ನಂತರ ಪ್ರತಿಮೆಯ ಪಕ್ಕದಲ್ಲಿ ನಿರ್ಮಾಣ ಮಾಡಿರುವ ಥೀಮ್ ಪಾರ್ಕ್ ಅನ್ನು ವೀಕ್ಷಿಸಿದರು.

ಇದಾದ ಬಳಿಕ ಬೆಂಗಳೂರು ಉತ್ತರ ಯಲಹಂಕ ಒಕ್ಕಲಿಗರ ಸಂಘದಿAದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಆನಂತರ ವೇದಿಕೆ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ ನೀಡುವುದಾಗಿ ಘೋಷಣೆ ಮಾಡಿದರು. ನಂತರ ವಿಧಾನಸೌಧದ ಮುಂದಿರುವ ಕುದುರೆಯ ಮೇಲೆ ವಿರಾಜಮಾನರಾಗಿರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಗಮನ ಸೆಳೆದ ವಾಲ್ ಆಫ್ ಗ್ರಾಟಿಟ್ಯೂಡ್

ಎಸ್.ಎಂ. ಕೃಷ್ಣ ರಸ್ತೆ (ಬೆಂಗಳೂರು-ಮೈಸೂರು ದಶಪಥ ರಸ್ತೆ) ಅಭಿವೃದ್ಧಿಗಾಗಿ ಯಾವುದೇ ವಿವಾದವಿಲ್ಲದೆ ಸ್ವಯಂಪ್ರೇರಿತವಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟ ರೈತರು ಮತ್ತು ಸ್ಥಳೀಯರನ್ನು ಗೌರವಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ‘ವಾಲ್ ಆಫ್ ಗ್ರಾಟಿಟ್ಯೂಡ್’ (ಕೃತಜ್ಞತಾ ಫಲಕ) ನಿರ್ಮಿಸಿದೆ. ಮೈಸೂರು ರಸ್ತೆಯಲ್ಲಿರುವ ಈ ವಿಶೇಷ ಗೋಡೆಯು ರೈತರ ತ್ಯಾಗವನ್ನು ಸ್ಮರಿಸುತ್ತದೆ. ರಸ್ತೆ ಉದ್ಘಾಟನೆ ನಂತರ ಈ ಫಲಕವನ್ನು ಸಿಎಂ ಗಣ್ಯರ ಜೊತೆಗೂಡಿ ಲೋಕಾರ್ಪಣೆ ಮಾಡಿದರು. ಇದು ಎಲ್ಲರ ಗಮನ ಸೆಳೆಯಿತು.

ತದ ನಂತರ ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯ ಬಳಿ ಬೆಂಗಳೂರಿನ ನಾಲ್ಕು ದಿಕ್ಕುಗಳಿಂದಲೂ ಸಚಿವರುಗಳ ನೇತೃತ್ವದಲ್ಲಿ ತಂದAತಹ ಪುರಜ್ಯೋತಿಗಳನ್ನು ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿದರು. ನಂತರ ಕೆಂಪೇಗೌಡರ ಕೋಟೆಯ ಪ್ರತಿಕೃತಿ ಎದುರು ಎಲ್ಲಾ ಪುರಜ್ಯೋತಿಗಳನ್ನು ಇಡಲಾಯಿತು.

ಇದಕ್ಕೂ ಮೊದಲು ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯಲ್ಲಿ ೧೦ ಕೆ ರನ್, ೫ ಕೆ ವಾಕಥಾನ್ ಏರ್ಪಡಿಸಲಾಗಿತ್ತು. ಸಾವಿರಾರು ಜನರು ನೂತನ ರಸ್ತೆಯಲ್ಲಿ ಓಡಿ ಸಂತಸಪಟ್ಟರು. ಈ ರಸ್ತೆ ಅಂತರರಾಷ್ಟಿçÃಯ ಗುಣಮಟ್ಟದಿಂದ ಕೂಡಿದೆ ಎಂದು ಅಭಿಪ್ರಾಯ ಹಂಚಿಕೊAಡರು. ಆನಂತರ ಶ್ರೀಮತಿ ಪ್ರೇಮಾ ಕೃಷ್ಣ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಪರಿಷತ್ ಸದಸ್ಯರ ಜೊತೆಗೂಡಿ ನೂತನ ರಸ್ತೆಯನ್ನು ಉದ್ಘಾಟಿಸಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಕೆ.ಹೆಚ್. ಮುನಿಯಪ್ಪ, ಕೃಷ್ಣ ಭೈರೇಗೌಡ, ಕರ್ನಾಟಕ ರಾಜ್ಯ ೫ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಶಾಸಕರಾದ ಪ್ರದೀಪ್ ಈಶ್ವರ, ರಿಜ್ವಾನ್ ಅರ್ಷದ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್, ಬೆಂಗಳೂರು ನಗರ ಪೋಲಿಸ್ ಆಯುಕ್ತರಾದ ಸಿಮಂತ್ ಸಿಂಗ್, ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ, ಬಯಪ್ಪ ಸಿಇಒ ಹರಿಮರನ್, ಸದಸ್ಯರುಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಾಖಲೆ ಅಭಿಯಾನ

ಶನಿವಾರ ಬೆಳಿಗ್ಗೆಯಿಂದಲೇ ೫೦-೬೦ ಸಾವಿರ ಸ್ವಯಂ ಸೇವಕರು ಉತ್ಸಾಹದಿಂದ ಕೆಂಪೇಗೌಡ ಬಡಾವಣೆ, ಶಿವರಾಂ ಕಾರಂತ ಬಡಾವಣೆ ಸೇರಿದಂತೆ ಇತರೆಡೆ ಸುಮಾರು ೧೫ ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು. ಕೇವಲ ೧೨ ಗಂಟೆಗಳ ಅವಧಿಯಲ್ಲಿ ಇಷ್ಟೊಂದು ಸಸಿಗಳನ್ನು ನೆಟ್ಟು ದಾಖಲೆ ನಿರ್ಮಿಸಲಾಯಿತು. ದಶಪಥ ರಸ್ತೆ ಉದ್ಘಾಟನೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವತಃ ಸಲಿಕೆ ಹಿಡಿದು ಸ್ಥಳೀಯ ಸಸಿಯಾದ “ಬಸವನ ಪಾದ” ಗಿಡ ನೆಟ್ಟು ನೀರೆರೆದರು.

ಉದ್ಯಾನ ನಗರಿ, ಏರ್ ಕಂಡೀಷನ್ ಸಿಟಿ ಎಂದು ಹೆಸರಾಗಿರುವ ಬೆಂಗಳೂರು ತನ್ನ ಉದ್ಯಾನಗಳಿಂದಲೇ ಹೆಸರಾಗಿದೆ. ಈ ಗರಿಮೆಯನ್ನು ಉಳಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಬಿಡಿಎ ವತಿಯಿಂದ ಆಯೋಜಿಸಲಾಗಿತ್ತು. ಮಿಯಾವಾಕಿ ಅರಣ್ಯ ಮಾದರಿಯಲ್ಲಿ ಸುಮಾರು ೨೫೦ ಎಕರೆ ಪ್ರದೇಶದಲ್ಲಿ ಸ್ಥಳೀಯ ಜಾತಿಯ ವಿವಿಧ ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಸಿರಾ ತಾಲ್ಲೂಕಿನ ಸ್ಪಟಿಕಪುರಿಯ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಇಂದು ಯಶವಂತಪುರದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದು, ಮುಂದಿನ ವರ್ಷ ಶಾಸಕರೊಂದಿಗೆ ಚರ್ಚಿಸಿ ಬ್ಯಾಟರಾಯನಪುರ, ಯಲಹಂಕ, ಕೆ.ಆರ್ ಪುರ ಅಥವಾ ಬೇರೆ ಕ್ಷೇತ್ರಗಳಲ್ಲಿ ಕೆಂಪೇಗೌಡರ ಜಯಂತಿಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಆಚರಿಸಲಾಗುವುದು. ಇನ್ನು ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಚರಣೆಗೆ ಜಿಬಿಎ ವತಿಯಿಂದ ಆದೇಶ ಮಾಡಲಾಗಿದೆ. ಕೆಂಪೇಗೌಡರ ಆಚಾರ ವಿಚಾರ ಅಳವಡಿಸಿಕೊಂಡು ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಬೆಂಗಳೂರಿಗೆ ಹೊಸ ರೂಪ ನೀಡಲು ಕ್ರಮ ಕೈಗೊಳ್ಳಲಾಗುವುದು.

ಡಿ.ಕೆ. ಶಿವಕುಮಾರ್, ಸಿಎಂ

ಎಸ್.ಎಂ. ಕೃಷ್ಣ ಅವರ ಹೆಸರಿನ ದಶಪಥ ರಸ್ತೆ ಲೋಕಾರ್ಪಣೆ
ರಾಜಧಾನಿಯಲ್ಲಿ ಬಿಗಡಾಯಿಸಿರುವ ಸಂಚಾರ ದಟ್ಟಣೆ ಕೊಂಚ ಮಟ್ಟಿಗೆ ನಿವಾರಿಸಲು ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಹೆಸರಿನ ದಶಪಥ ರಸ್ತೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಬ್ಬನ್ ಕಟ್ ಮಾಡುವ ರಸ್ತೆಯನ್ನು ಉದ್ಘಾಟಿಸಿದರು. ಈ ವೇಳೆ ಪ್ರೇಮಾ ಕೃಷ್ಣ, ಡಿಸಿಎಂ ಪರಮೇಶ್ವರ್, ಸಚಿವರಾದ ಕೆ.ಹೆಚ್ ಮುನಿಯಪ್ಪ, ಕೃಷ್ಣಬೈರೇಗೌಡ, ಬಿಡಿಎ ಅಧ್ಯಕ್ಷ ಶಾಸಕ ಎನ್ ಎ ಹ್ಯಾರಿಸ್ ಉಪಸ್ಥಿತರಿದ್ದರು.

ಕೆಂಪೇಗೌಡ ಪ್ರಶಸ್ತಿ ಪ್ರಧಾನ

ಕೆಂಪೇಗೌಡ ಅಂತರರಾಷ್ಟಿçÃಯ ಪ್ರಶಸ್ತಿಯನ್ನು ದೇಶದ ಪ್ರಮುಖ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ಸಂಸ್ಥೆಯಾಗಿ, ಆಧುನಿಕ ಕೃಷಿ ಹಾಗೂ ನವೀನ ತಂತ್ರಜ್ಞಾನವನ್ನು ರೈತರಿಗೆ ಪರಿಚಯಿಸುವ ಮೂಲಕ ಹೆಸರು ಮಾಡಿರುವ ಜಿಕೆವಿಕೆ, ನಗರ ಯೋಜನಾ ತಜ್ಞರಾಗಿ ಪ್ರಸಿದ್ಧಿ ಹೊಂದಿರುವ ಎಂಜಿನಿಯರ್ ಎಸ್. ವಿಶ್ವನಾಥ್ ಅವರು ಹಾಗೂ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಹುಲ್ ದ್ರಾವಿಡ್ ಅವರು ವಿದೇಶದಲ್ಲಿ ಇದ್ದ ಕಾರಣಕ್ಕೆ ಅವರು ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಜಿಕೆವಿಕೆ ಸಂಸ್ಥೆಯ ಪರವಾಗಿ ಉಪಕುಲಪತಿಗಳಾದ ಎಸ್.ವಿ.ಸುರೇಶ್ ಅವರು ಪಡೆದುಕೊಂಡರು.

Recent Articles

spot_img

Related Stories

Share via
Copy link