10 ಸಾವಿರ ಭಾರತ್ ಜೋಡೋ ಯುವಸಂಘ ಸ್ಥಾಪನೆ

ಬೆಂಗಳೂರು : ಯುವಜನರಲ್ಲಿ ಕ್ರೀಡೆ, ಸಂಸ್ಕöÈತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಒಟ್ಟಿಗೆ ಬೆಳೆಸುವ ಅಗತ್ಯವಿದೆ, ಅದಕ್ಕಾಗಿ ನಾವು ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅಧಿಕೃತ ಆದೇಶವನ್ನು ಹೊರಡಿಸುತ್ತಿದ್ದೇವೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಯೋಜನೆಯು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿರಲಿಲ್ಲ, ಬದಲಾಗಿ ಅತ್ಯಂತ ವ್ಯವಸ್ಥಿತವಾದ ರೂಪುರೇಷೆಗಳನ್ನು ಒಳಗೊಂಡಿತ್ತು. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಯುವ ಸಂಘವನ್ನು ಸ್ಥಾಪಿಸಲು ನಿರ್ಧರಿಸಲಾಯಿತು. ನಗರ ಮತ್ತು ಪಟ್ಟಣ ಪ್ರದೇಶಗಳಿಗೂ ಸಮಾನ ಆದ್ಯತೆ ನೀಡುವ ದೃಷ್ಟಿಯಿಂದ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ಮಹಾನಗರ ಪಾಲಿಕೆ ಮತ್ತು ಜಿಬಿಎ ವ್ಯಾಪ್ತಿಯಲ್ಲಿ ಸರಾಸರಿ 10 ಸಾವಿರ ಜನಸಂಖ್ಯೆಗೆ ಒಂದು ಸಂಘವನ್ನು ಸ್ಥಾಪಿಸಲು ಸ್ಪಷ್ಟ ಸೂಚನೆಗಳನ್ನು ನೀಡಲಾಯಿತು ಎಂದರು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಪ್ರತಿಯೊಂದು ಸಂಘದ ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ 24,000 ಗೌರವಧನದ ಜೊತೆಗೆ ಪ್ರತಿ ಸಂಘಕ್ಕೆ ವಾರ್ಷಿಕ ತಲಾ ?10 ಲಕ್ಷ ಅನುದಾನ ನೀಡಲಾಗುವುದು. ಭಾರತ್ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪçಜೆಗಳಾಗಿ ರೂಪಿಸುವುದು ನಮ್ಮ ಉದ್ದೇಶ.

Recent Articles

spot_img

Related Stories

Share via
Copy link