
ಬೇಡಿಕೆಗಳಿಗೆ ಒಪ್ಪಿದ ಸರ್ಕಾರ, ಜಂತರ್- ಮಂತರ್‌ನಲ್ಲಿ ಸಂಭ್ರಮೋತ್ಸವ : ಸಿಜೆಪಿ ಪ್ರತಿಭಟನೆ ಅಂತ್ಯ
2018ರಲ್ಲಿ ಎಂ.ಜೆ. ಅಕ್ಬರ್ ರಾಜೀನಾಮೆ ನೀಡಿದ ಬಳಿಕ, ರಾಜಕೀಯ ವಿವಾದ ಹಾಗೂ ಆಡಳಿತಾತ್ಮಕ ಹಿನ್ನಡೆಯ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಮೋದಿ ಕೇಂದ್ರ ಸಂಪುಟ ದರ್ಜೆ ಸಚಿವ ಧರ್ಮೇಂದ್ರ ಪ್ರಧಾನ್.
ನವದೆಹಲಿ: ದೇಶಾದ್ಯಂತ ತೀವ್ರ ಗದ್ದಲ ಸೃಷ್ಟಿಸಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಕಳೆದ ಒಂದು ತಿಂಗಳಿಗಿAತಲೂ ಹೆಚ್ಚು ಕಾಲದಿಂದ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವಿದ್ಯಾರ್ಥಿಗಳು ಮತ್ತು ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದವು. ತೀವ್ರ ವಿದ್ಯಾರ್ಥಿ ಪ್ರತಿಭಟನೆ ಹಾಗೂ ರಾಜಕೀಯ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2018ರಲ್ಲಿ ಎಂ.ಜೆ. ಅಕ್ಬರ್ ರಾಜೀನಾಮೆ ನೀಡಿದ ಬಳಿಕ, ರಾಜಕೀಯ ವಿವಾದ ಹಾಗೂ ಆಡಳಿತಾತ್ಮಕ ಹಿನ್ನಡೆಯ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಕೇಂದ್ರ ಸಂಪುಟ ದರ್ಜೆ ಸಚಿವ ಧರ್ಮೇಂದ್ರ ಪ್ರಧಾನ್ ಆಗಿದ್ದಾರೆ.
ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಪ್ರಮುಖ ರಾಜಕೀಯ ಬೆಳವಣಿಗೆ ಸಂಭವಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಪ್ರಧಾನ್, ದೇಶದ ಯುವಜನತೆಯ ಭವಿಷ್ಯ ಮತ್ತು ರಾಷ್ಟçದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿಗೆ ಬರೆದ ಪತ್ರದಲ್ಲಿ ಪ್ರಧಾನ್ ನೀಡಿದ ಸ್ಪಷ್ಟನೆ
ತಮ್ಮ ರಾಜೀನಾಮೆ ಪತ್ರ ಹಾಗೂ ಘಿ (ಟ್ವಿಟರ್) ಖಾತೆಯಲ್ಲಿ ಹೇಳಿಕೆ ನೀಡಿರುವ ಧರ್ಮೇಂದ್ರ ಪ್ರಧಾನ್, “ಕಳೆದ ನಾಲ್ಕು ದಶಕಗಳಿಂದ ನಾನು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಶ್ರಮಿಸಿದ್ದೇನೆ. ಪ್ರಸ್ತುತ ಜಂತರ್ ಮಂತರ್ ಮತ್ತು ದೇಶಾದ್ಯಂತ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ರಾಷ್ಟçವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು. ಯಾವುದೇ ಭಾರತೀಯ ವಿದ್ಯಾರ್ಥಿ ಕಾನೂನು ಸಂಕಷ್ಟಗಳಲ್ಲಿ ಸಿಲುಕದೆ, ತಮ್ಮ ವ್ಯಾಸಂಗ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು ಎನ್ನುವುದೇ ನನ್ನ ಮುಖ್ಯ ಉದ್ದೇಶವಾಗಿದೆ” ಎಂದಿದ್ದಾರೆ.
ಪರೀಕ್ಷಾ ಅಕ್ರಮದ ವಿಷಯದಲ್ಲಿ ನಾವು ಮೊದಲ ದಿನದಿಂದಲೇ ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ. ತನಿಖೆಯನ್ನು ಸಿಬಿಐಗೆ ವಹಿಸಿ, ಮರುಪರೀಕ್ಷೆ ನಡೆಸಲು ತಕ್ಷಣದ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇತ್ತೀಚಿನ ಘಟನೆಗಳು ನನಗೆ ತೀವ್ರ ಮನಸ್ಸಿಗೆ ನೋವುಂಟುಮಾಡಿವೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ, ದೇಶದ ಯುವಶಕ್ತಿಯ ಹಿತಾಸಕ್ತಿಯೇ ನಮಗೆ ಮುಖ್ಯ ಎಂದು ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ನೀಟ್ ಅಕ್ರಮ ಮತ್ತು ಸರ್ಕಾರದ ಕ್ರಮಗಳು
ಮೇ 3 ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಕಂಡುಬAದ ತಕ್ಷಣವೇ ಕೇಂದ್ರ ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಿತ್ತು. ಪರೀಕ್ಷಾ ಅಕ್ರಮದ ಸಂಪೂರ್ಣ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಅಃI) ಹಸ್ತಾಂತರಿಸಲಾಗಿತ್ತು. ಜೂನ್ 21 ರಂದು ಯಶಸ್ವಿಯಾಗಿ ಮರು ಪರೀಕ್ಷೆ ನಡೆಸಿ, ಜುಲೈ 16 ರಂದು ಫಲಿತಾಂಶ ಪ್ರಕಟಿಸಲಾಗಿತ್ತು. ಮುಂದಿನ ವರ್ಷದಿಂದ ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷೆಯನ್ನು ಸಂಪೂರ್ಣ ?ಕಂಪ್ಯೂಟರ್ ಆಧಾರಿತ ಪರೀಕ್ಷೆ? (ಅಃಖಿ) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ವಿದ್ಯಾರ್ಥಿ ಶಕ್ತಿಗೆ ಸಿಕ್ಕ ಜಯ:
ಸಿಜೆಪಿ ಅಧ್ಯಕ್ಷ ಅಭಿಜೀತ್ ದೀಪ್ಕೆ ಪ್ರತಿಕ್ರಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಧ್ಯಕ್ಷ ಅಭಿಜೀತ್ ದೀಪ್ಕೆ ಪ್ರತಿಕ್ರಿಯಿಸಿದ್ದು, “ಇದು ವಿದ್ಯಾರ್ಥಿ ಶಕ್ತಿ ಮತ್ತು ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ಡ ಜಯ. ಯಾರಿಗೂ ಹೆದರುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.ಉಳಿದಂತೆ ನೀಟ್ ಪರೀಕ್ಷಾ ಗೊಂದಲ ಹಾಗೂ ಮಾನಸಿಕ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಬೇಕು. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಜುಲೈ 20 ರಂದು ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಗೆ ಕೇಂದ್ರ ಒಪ್ಪಿರುವುದರಿಂದ ಪ್ರತಿಭಟನೆಯನ್ನು ಅಂತ್ಯಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರಭುತ್ವಕ್ಕೆ ಸಿಕ್ಕ ದೊಡ್ದ ಗೆಲುವು-ವಾಂಗ್ಚುಕ್
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ದೇಶಾದ್ಯಂತ ವಿದ್ಯಾರ್ಥಿಗಳಿಂದ ಭುಗಿಲೆದ್ದಿದ್ದ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್,”ಇದು ದೇಶದ ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ದ ಗೆಲುವು” ಎಂದು ಹೇಳಿದ್ದಾರೆ.
ರಾಜೀನಾಮೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಮತ್ತೊಂದೆಡೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಅವರ ಸಾರ್ವಜನಿಕ ಸೇವೆಯನ್ನು ಶ್ಲಾಘಿಸಿದೆ.
ಪ್ರಧಾನ್ ರಾಜೀನಾಮೆಗೆ ಕೇಂದ್ರದ ಪ್ರತಿಕ್ರಿಯೆ
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ತೀವ್ರಗೊಂಡಿದ್ದ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದು, ಪ್ರಧಾನ್ ಅವರ ಸಾರ್ವಜನಿಕ ಜೀವನ ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿಯ ನಿರಂತರ ಸೇವೆಯನ್ನು ಶ್ಲಾಘಿಸಿದ್ದಾರೆ.
ಕಿರಣ್ ರಿಜಿಜು ಅವರ ಶ್ಲಾಘನೆ
ಧರ್ಮೇಂದ್ರ ಪ್ರಧಾನ್ ಅವರು ಭಾರತದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿದ್ದಾರೆ. ಮುಂಬರುವ ದಿನಗಳಲ್ಲೂ ಅವರು ದೇಶ ಸೇವೆ ಮುಂದುವರಿಸಲಿದ್ದಾರೆ ಎಂದು ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದ ಯುಜನತೆ ಭವಿಷ್ಯದ ದೃಷ್ಠಿಯಿಂದ ರಾಜೀನಾಮೆ
ದೇಶದ ಯುವಜನತೆಯ ಭವಿಷ್ಯವು ಯಾವುದೇ ಗೊಂದಲ ಅಥವಾ ಕಾನೂನು ಸಂಕಷ್ಟಗಳಲ್ಲಿ ಸಿಲುಕಬಾರದು ಹಾಗೂ ಈ ಪರಿಸ್ಥಿತಿಯನ್ನು ದೇಶವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ ರಾಜೀನಾಮೆ ಸಲ್ಲಿಸಿರುವುದಾಗಿ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಪ್ರತಿಭಟನಾಕಾರರ ಸಂಭ್ರಮ
ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಪ್ರಧಾನ್ ಅವರ ರಾಜೀನಾಮೆ ಪ್ರಕಟವಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರು ಸಂಭ್ರಮಾಚರಣೆ ನಡೆಸಿದರು.
ಪ್ರಧಾನಮಂತ್ರಿಗಳು ದೇಶದ ಯುವಕರ ಕ್ಷಮೆ ಯಾಚಿಸಲಿ : ರಾಹುಲ್
ದೇಶಾದ್ಯಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊAಡಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಮಗೆ ನಿಮ್ಮೆಲ್ಲರ ಬಗ್ಗೆ ಹೆಮ್ಮೆ ಇದೆ. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ತಮ್ಮ ಭವಿಷ್ಯವನ್ನು ರಕ್ಷಿಸಲು ಬೀದಿಗಿಳಿದು ದೃಢವಾಗಿ ನಿಂತ ಪ್ರತಿಯೊಬ್ಬ ಯುವಕ-ಯುವತಿಯರಿಗೂ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಹಾಗೂ ದೇಶದ ಕ್ಷಮೆಯಾಚಿಸಬೇಕು. ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿಸಬೇಕು ಎಂಬ ಎರಡು ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ. ರೈತರು, ಕಾರ್ಮಿಕರು ಮತ್ತು ಶೋಷಿತರು ತಮ್ಮ ಘನತೆಗಾಗಿ ಧ್ವನಿ ಎತ್ತಬೇಕೆಂದಿರುವ ಅವರು ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ. ಭಯಪಡಬೇಡಿ ಎಂದು ಅವರು ಅಭಯ ನೀಡಿದ್ದಾರೆ.








