
brp_mask:0;
brp_del_th:null;
brp_del_sen:null;
delta:null;
module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 36;
ಮೈಸೂರು/ಪಿರಿಯಾಪಟ್ಟಣ : ರಾಜ್ಯದಾದ್ಯಂತ ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾಗಿದ್ದು, ಈ ಸಂಬಧ ಪರಿಸ್ಥಿತಿಯನ್ನು ಅವಲೋಕಿಸಲು ಬೆಳೆ ಹಾನಿ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದೆ. ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರ ಸಮೀಕ್ಷೆ ನಡೆಸಿ ಎಂದು ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತಿಳಸಿದರು.
ತಾಲ್ಲೂಕಿನ ರವಂದರು ಹೋಬಳಿಯ ಕಿತ್ತೂರು ಸಮೀಪ ಗಳಗನ ಕೆರೆ ಗೇಟ್ ಬಳಿ ಭೇಟಿ ನೀಡಿ ಬರ ವೀಕ್ಷಣೆ ಮಾಡಿ ಮಾತನಾಡಿದ ಅವರು ಮಳೆಯ ಕೊರತೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಬೆಳೆಗಳ ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡುಬoದಿದೆ. ಪಿರಿಯಾಪಟ್ಟಣ ಭಾಗದಲ್ಲೂ ಹೊಗೆಸೊಪುö್ಪ ಬೆಳೆಯ ಗುಣಮಟ್ಟ ಹಾಗೂ ಇಳುವರಿ ಕಡಿಮೆಯಾಗಿದೆ. ಸುಮಾರು 27,000 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗಿರುವ ಪೈಕಿ ಸುಮಾರು 25,000 ಹೆಕ್ಟೇರ್ ಪ್ರದೇಶದಲ್ಲಿ ಹೊಗೆಸೊಪುö್ಪ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆಯಾಗಿಲ್ಲ ಎಂದರು.
ಮೆಕ್ಕೆ ಜೋಳದ ಬೆಳೆಗೆ ಬಿಳುಸುಳಿ ರೋಗ ತೀವ್ರವಾಗಿ ಬಾಧಿಸುತ್ತಿದೆ. ಒಂದೇ ಭೂಮಿಯಲ್ಲಿ ನಿರಂತರವಾಗಿ ಒಂದೇ ರೀತಿಯ ಬೆಳೆ ಬೆಳೆಯುತ್ತಿರುವುದರಿಂದ ಮಣ್ಣಿನ ಫಲವತ್ತತೆ ಕುಗ್ಗಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ತಡೆಯಲು ಕಷ್ಟಸಾಧ್ಯವಾಗಿದ್ದು, ಒಮ್ಮೆ ಬಂದರೆ ರೋಗ ಹೋಗಲಾಡಿಸಿ ಇಳುವರಿ ಹೆಚ್ಚಿಸುವುದು ಕಷ್ಟ. ಮೆಕ್ಕೆ ಜೋಳ ಅಥವಾ ಇತರೆ ಬೆಳೆಗಳ ನಷ್ಟಕ್ಕೆ ಹಾಗೂ ರಾಗಿ ಬೆಳೆಗೆ ಬೆಂಬಲ ಬೆಲೆ ಅಥವಾ ಪರಿಹಾರ ಒದಗಿಸುವ ಕುರಿತು ಸರ್ಕಾರದ ಹಂತದಲ್ಲಿ ಹಾಗೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎನ್.ಡಿ.ಆರ್.ಎಫ್ ನಿಯಮಗಳ ಅಡಿಯಲ್ಲಿ ಬೆಳೆ ರೋಗಗಳಿಗೆ ನೇರವಾಗಿ ಪರಿಹಾರ ನೀಡುವ ಯಾವುದೇ ನಿರ್ದಿಷ್ಟ ಅವಕಾಶ ಇಲ್ಲ. ಮಳೆಯಾಶ್ರಿತ ಬೆಳೆ ನಷ್ಟಗಳಿಗೆ ಮಾತ್ರ ನಿಯಮಗಳು ಅನ್ವಯಿಸುತ್ತವೆ. ಅಧಿಕಾರಿಗಳು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ ವಾಸ್ತವ ವರದಿ ಸಲ್ಲಿಸಬೇಕು. ರೈತರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ತೊಂದರೆ ನಿವಾರಿಸಲು ಕಾರ್ಯಪ್ರವೃತ್ತರಾಗಿ ಡಾ. ಯತೀಂದ್ರ ಸಿದ್ದರಾಮಯ್ಯ
ತಾಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣವೇ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವಂತೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾವಂದೂರಿನ ಶಿವಶಕ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆಗೆ ಮಾತನಾಡಿದ ಅವರು ತಾಲೂಕಿನಾದ್ಯಂತ ಇತ್ತೀಚೆಗೆ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಿ ಎಂದರು..
ತಾಲೂಕಿನ ಹಲವೆಡೆ ಬೇಸಿಗೆ ಮತ್ತು ಮುಂಗಾರು ಅವಧಿಯಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದAತೆ ತಡೆಗಟ್ಟುವುದು ತಾಲೂಕು ಆಡಳಿತದ ಪ್ರಮುಖ ಆದ್ಯತೆಯಾಗಬೇಕು ಎಂದರು.
ಕುಡಿಯುವ ನೀರಿನ ತೀವ್ರ ಅಭಾವವಿರುವ ಪ್ರದೇಶಗಳನ್ನು ಗುರುತಿಸಿ, ತಕ್ಷಣವೇ ನೂತನವಾಗಿ ಬೋರ್ವೆಲ್ (ಕೊಳವೆ ಬಾವಿ) ಕೊರೆಸಲು ಆಡಳಿತಾತ್ಮಕ ಮತ್ತು ತಾಂತ್ರಿಕ ಕ್ರಮ ಕೈಗೊಳ್ಳಬೇಕು. ಹೊಸದಾಗಿ ಕೊಳವೆಬಾವಿ ಕೊರೆಸಲು ಕಾಲಾವಕಾಶ ಅಗತ್ಯವಿದ್ದಲ್ಲಿ ಅಥವಾ ಅಂತರ್ಜಲ ಮಟ್ಟ ಕುಸಿದಿರುವ ಕಡೆಗಳಲ್ಲಿ, ಸುತ್ತಮುತ್ತಲಿನ ಖಾಸಗಿ ವ್ಯಕ್ತಿಗಳ ಅಥವಾ ರೈತರ ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಂಡು ಗ್ರಾಮಸ್ಥರಿಗೆ ತಕ್ಷಣ ನೀರು ಸರಬರಾಜು ಮಾಡಬೇಕು. ಇಲ್ಲವಾದಲ್ಲಿ ಹೊಸ ಬೋರ್ವೆಲ್ ಮತ್ತು ಖಾಸಗಿ ಬೋರ್ವೆಲ್ ಗಳ ಲಭ್ಯತೆ ಸಾಧ್ಯವಾಗದ ಅತ್ಯಂತ ಸಮಸ್ಯಾತ್ಮಕ ಪ್ರದೇಶಗಳಿಗೆ ತಕ್ಷಣವೇ ಟ್ಯಾಂಕರ್ಗಳ ಮೂಲಕ ದಿನನಿತ್ಯ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂದರು.
ಸಭೆಯಲ್ಲಿ ತಾಲೂಕು ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಮಾಜಿ ಸಚಿವರ ಹಾಗೂ ಶಾಸಕ ಸಚಿವ ವೆಂಕಟೇಶ್ ಅವರು ಉಪಸ್ಥಿತರಿದ್ದರು.
ಕಳೆದ ಬಾರಿಯ ಹರಾಜಿನಲ್ಲಿ ತಂಬಾಕು ಬೆಲೆ ತೀವ್ರವಾಗಿ ಕುಸಿದಿದ್ದು ಕೆಜಿಗೆ ?130 ಹಾಗೂ ?90 ರವರೆಗೂ ಕಡಿಮೆಯಾಗಿತ್ತು, ಇದರಿಂದ ರೈತರು ಅನುಭವಿಸಿದ ನಷ್ಟವನ್ನು ಸರಿಪಡಿಸಲು ಸರ್ಕಾರದಿಂದ ಬೆಂಬಲ ಅಥವಾ ಪರಿಹಾರ ಅಗತ್ಯವೆಂದು ಹೇಳಿದರು. ರಾಜ್ಯ ತಂಬಾಕು ಮಂಡಳಿಯ ಅಧಿಕಾರಿಗಳು ಪರವಾನಗಿ ಹೊಂದಿರುವ ಬೆಳೆಗಾರರು ಮತ್ತು ಮಾರುಕಟ್ಟೆ ಅಂಕಿ-ಅAಶಗಳ ಸಮಗ್ರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ. ಲಕ್ಷಿö್ಮÃಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ತಹಸಿಲ್ದಾರ್ ನಿಸರ್ಗ ಪ್ರಿಯ, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್, ಖುಷಿ ಇಲಾಖೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಡಿಯುವ ನೀರಿನ ಸರಬರಾಜು ಮತ್ತು ಬೆಳೆ ಹಾನಿ ಪರಿಹಾರದಂತಹ ಸೂಕ್ಷ÷್ಮ ವಿಚಾರಗಳಲ್ಲಿ ಅಧಿಕಾರಿಗಳು ನಿರ್ಲಕ್ಷ÷್ಯ ವಹಿಸಿದರೆ ಸಹಿಸುವುದಿಲ್ಲ. ತಾಲೂಕಿನ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ ಎಂಬ ದೂರುಗಳು ಬರದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮತ್ತು ಎಂಜಿನಿಯರಿAಗ್ ವಿಭಾಗದ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಕಾರ್ಯನಿರ್ವಹಿಸಬೇಕು. ಸಂಬAಧಪಟ್ಟ ಅಧಿಕಾರಿಗಳು ಪ್ರತಿದಿನ ನೀರಿನ ಅಭಾವವಿರುವ ಗ್ರಾಮಗಳ ಪಟ್ಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.
ಡಾ ಯತೀಂದ್ರ ಸಿದ್ದರಾಮಯ್ಯ, ಸಚಿವರು








