
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಹಿಂದಿನ ಕೆಲವು ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ.
ಜಲಸಂಪನ್ಮೂಲ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಆಹಾರ ಇಲಾಖೆಯ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ. ಯು.ಟಿ.ಖಾದರ್ಗೆ ಆರೋಗ್ಯ ಇಲಾಖೆಯ ಜೊತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ ಖಾತೆ ಕೊಡಲಾಗಿದೆ. ವಾಲ್ಮೀಕಿ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ಬಿ.ನಾಗೇಂದ್ರ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ಲಭಿಸಿದೆ. ಈ ಬಗ್ಗೆ ಲೋಕಭವನವು ಅಧಿಕೃತವಾಗಿ ಮಾಹಿತಿ ನೀಡಿದೆ.
ಜಮೀರ್ ಅಹ್ಮದ್ – ವಸತಿ
ರಾಮಲಿಂಗಾರೆಡ್ಡಿ – ಅರಣ್ಯ, ಜೀವಿಶಾಸ್ತç ಮತ್ತು ಪರಿಸರ
ಲಕ್ಷ÷್ಮಣ ಸವದಿ – ಸಹಕಾರ, ಕೃಷಿ ಮಾರುಕಟ್ಟೆ
ರುದ್ರಪ್ಪ ಮಾನಪ್ಪ ಲಮಾಣಿ – ಸಕ್ಕರೆ ಮತ್ತು ಜವಳಿ
ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕöÈತಿ
ಯು.ಟಿ. ಖಾದರ್ – ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಟಿ. ರಘುಮೂರ್ತಿ – ಪರಿಶಿಷ್ಠ ವರ್ಗಗಳ ಕಲ್ಯಾಣ
ಡಾ.ಅಜಯ್ ಸಿಂಗ್ – ಸಣ್ಣ ನೀರಾವರಿ ಮತ್ತು ಐಟಿ-ಬಿಟಿ
ಚಲುವರಾಯಸ್ವಾಮಿ – ಬೃಹತ್ ಮತ್ತು ಮಧ್ಯಮ ನೀರಾವರಿ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
ಶಿವಲಿಂಗೇಗೌಡ – ಅಬಕಾರಿ
ಪುಟ್ಟರಂಗ ಶೆಟ್ಟಿ – ಪಶುಸಂಗೋಪನೆ ಮತ್ತು ರೇಷ್ಮೆ
ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ
ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
ಕೆ.ಎಸ್. ಬಸವಂತಪ್ಪ – ಮುಜರಾಯಿ , ಮೀನುಗಾರಿಕೆ, ಬಂದರು ಜಲಸಾರಿಗೆ
ಎಸ್.ಎಸ್. ಮಲ್ಲಿಕಾರ್ಜುನ – ಗಣಿ & ಭೂ ವಿಜ್ಞಾನ, ತೋಟಗಾರಿಕೆ
ರಿಜ್ವಾನ್ ಆರ್ಷದ್ – ಆಹಾರ ಮತ್ತು ನಾಗರಿಕ
ನರೇಂದ್ರಸ್ವಾಮಿ – ಕೃಷಿ
ಹೆಚ್.ಸಿ. ಬಾಲಕೃಷ್ಣ – ಪೌರಾಡಳಿತ
ಬಿ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ
ಕೆ.ಹೆಚ್. ಮುನಿಯಪ್ಪ – ಸಮಾಜ ಕಲ್ಯಾಣ
ಡಿ.ಕೆ.ಶಿವಕುಮಾರ್ – ಮುಖ್ಯಮಂತ್ರಿ
ಹಣಕಾಸು, ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ, ಕೃಷಿ ಮಾರುಕಟ್ಟೆ, ಟೌನ್ ಮತ್ತು ಕಂಟ್ರಿ ಪ್ಲಾನಿಂಗ್, ಬಿಬಿಎಂಪಿ ವ್ಯಾಪ್ತಿಗೆ ಹೊರತಾದ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ ಮತ್ತು ಬಿಎಂಆರ್ಡಿಎ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲ ಖಾತೆಗಳು.








