ಸ್ಥಳೀಯ ಸಮರಕ್ಕೆ ಕೈ – ಕಮಲ ಯಾತ್ರಾ

ಕಾಂಗ್ರೆಸ್ ನಿಂದ ಭಾರತ್ ಜೋಡೋ-2 ಆರಂಭ , ಇಂದಿನಿAದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ 

ಬೆಂಗಳೂರು: ಮುಂಬರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಜತೆಗೆ ಮುಂದಿನ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯದ ಪ್ರಮುಖ ಆಡಳಿತ ಹಾಗೂ ವಿರೋಧ ಪಕ್ಷಗಳು ಯಾತ್ರಾ ರಾಜಕಾರಣಕ್ಕೆ ಧುಮುಕಿವೆ. ಕಾಂಗ್ರೆಸ್ ಪಕ್ಷ ಭಾರತ್ ಜೋಡೋ-2 ಯಾತ್ರೆಗೆ ಚಾಲನೆ ನೀಡಿದ್ದರೆ, ಬಿಜೆಪಿ ಇಂದಿನಿAದ (ಅಕ್ಟೋಬರ್ 1) ಸೇವಾ ಸಂಕಲ್ಪ ಹಾಗೂ ವಿಜಯ ಸಂಕಲ್ಪ ಯಾತ್ರೆಯನ್ನು ಆರಂಭಿಸುತ್ತಿದೆ.

ಬಿ.ವೈ. ವಿಜಯೇಂದ್ರ ಕ್ಷೇತ್ರದಿಂದಲೇ ಕಾಂಗ್ರೆಸ್ ಕೌಂಟರ್: ರಾಹುಲ್ ಗಾಂಧಿ ಅವರು ನಡೆಸಿದ್ದ ಮೊದಲ ‘ಭಾರತ್ ಜೋಡೋ’ ಯಾತ್ರೆ 2022ರ ಸೆಪ್ಟೆಂಬರ್ 30ರಂದು ಗುಂಡ್ಲುಪೇಟೆ ಮೂಲಕ ಕರ್ನಾಟಕವನ್ನು ಪ್ರವೇಶಿಸಿತ್ತು. ಅದೇ ದಿನದ ಸವಿನೆನಪಿನಲ್ಲಿ ಕಾಂಗ್ರೆಸ್ ಈಗ ‘ಭಾರತ್ ಜೋಡೋ-2’ ಯಾತ್ರೆಯನ್ನು ಆರಂಭಿಸಿದೆ. ವಿಶೇಷವೆಂದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸ್ವಕ್ಷೇತ್ರವಾದ ಶಿಕಾರಿಪುರದಿಂದಲೇ ಈ ಯಾತ್ರೆಗೆ ಚಾಲನೆ ನೀಡಲಾಗಿದೆ.

ಮೊದಲ ಯಾತ್ರೆ ಹಾದುಹೋಗಿದ್ದ 11 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ 29 ಜಿಲ್ಲೆಗಳ ಪೈಕಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದ 84 ಕ್ಷೇತ್ರಗಳಲ್ಲಿ ಈ ಪಾದಯಾತ್ರೆ ನಡೆಯಲಿದೆ. ಪ್ರತಿದಿನ 10 ಕಿ.ಮೀ. ಪಾದಯಾತ್ರೆ ಹಾಗೂ ಬೃಹತ್ ಸಮಾವೇಶ ನಡೆಯಲಿದ್ದು, ಒಟ್ಟು 84 ದಿನಗಳ ಕಾಲ ಯಾತ್ರೆ ಸಾಗಲಿದೆ. ಶಿವಮೊಗ್ಗದಲ್ಲಿ ನಡೆದ ಚಾಲನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ನಾಯಕರು, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಮಧು ಬಂಗಾರಪ್ಪ, ಬಸಂತಪ್ಪ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದಾರೆ.

ಕುರುಡುಮಲೆ ಗಣಪತಿ ಸನ್ನಿಧಿಯಿಂದ ಬಿಜೆಪಿ ಯಾತ್ರೆ : ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬಿಜೆಪಿ ‘ಸೇವಾ ಸಂಕಲ್ಪ’ ಹಾಗೂ ‘ವಿಜಯ ಸಂಕಲ್ಪ’ ಯಾತ್ರೆಗಳನ್ನು ಒಟ್ಟಿಗೆ ಹಮ್ಮಿಕೊಂಡಿದೆ. ನಾಳೆ ಕೋಲಾರ ಜಿಲ್ಲೆಯ ಪ್ರಸಿದ್ಧ ಕುರುಡುಮಲೆ ಗಣೇಶ ದೇವಾಲಯದಿಂದ ಈ ಯಾತ್ರೆಗೆ ಚಾಲನೆ ಸಿಗಲಿದೆ.

ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಜನಪ್ರಿಯ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರವನ್ನು ಜನರೆದುರು ಬಿಚ್ಚಿಡುವುದು ಈ ಯಾತ್ರೆಯ ಮುಖ್ಯ ಉದ್ದೇಶ. ಪ್ರತಿ ಕ್ಷೇತ್ರದಲ್ಲಿ ರಕ್ತದಾನ, ಆರೋಗ್ಯ ತಪಾಸಣೆ, ರೈತರು ಮತ್ತು ಮಹಿಳೆಯರೊಂದಿಗೆ ಸಂವಾದ ಹಾಗೂ ಬೂತ್ ಮಟ್ಟದ ಮುಖಂಡರ ಸಭೆಗಳನ್ನು ಆಯೋಜಿಸಲಾಗಿದೆ. ಈ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ವಿ. ಸೋಮಣ್ಣ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಅಂಧ ಭಕ್ತಿ ದೂರವಾಗಿಸಲು ಭಾರತ್ ಜೋಡೋ
69 ಕ್ಷೇತ್ರಗಳಲ್ಲಿ ಜನತಾ ಜೋಡೊ ಜಾಗೃತಿ ಪಾದಯಾತ್ರೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಜನರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಪ್ರಜಾಪ್ರಭುತ್ವದ ಕಗ್ಗೂಲೆ ನಡೆಸಲಾಗುತ್ತಿರುವ ವಿರುದ್ಧ ಯಾತ್ರೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಕಗ್ಗೂಲೆ ನಡೆಯುತ್ತಿರುವ ಬಗ್ಗೆ ಜಾಗೃತಿ ಪಾದಯಾತ್ರೆ ನಡೆಸಲಾಗುತ್ತಿದೆ. ನಿರುದ್ಯೋಗ ಹಾಗೂ ಬೆಲೆ ಏರಿಕೆ ವಿರುದ್ಧ ಅಂಧ ಭಕ್ತರಾಗಬಾರದು ಎಂಬ ಜಾಗೃತಿ, ಬರಗಾಲದ ಕುರಿತು ಸರಿಯಾದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಪಾದಯಾತ್ರೆ ಮಾಡಲಾಗುತ್ತಿದೆ. ಬರಗಾಲದ ಪರಿಹಾರದ ಕುರಿತು ಸಂಸದರ ಜೊತೆ ನಡೆಸಿ, ಪ್ರಧಾನ ಮಂತ್ರಿಯನ್ನು ಭೇಟಿ ಮಾಡಲು ಹೋದ್ರೆ ಅಲ್ಲಿ ಯಾರೂ ಬರಲಿಲ್ಲ. ಇದರಿಂದ ಸಂಸದರಿಗೆ ರಾಜ್ಯದ ಬಗ್ಗೆ ಯಾವುದೇ ಕನಿಕರ ಇಲ್ಲದಂತೆ ಆಗಿದೆ. ಇದರ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.

ಸ್ಥಳೀಯ ಚುನಾವಣೆ ಗೆಲ್ಲುವ ಗುರಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಕ್ಟೋಬರ್ 1ರಿಂದ ತಾವು ಕೂಡ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆವು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವುದು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

Recent Articles

spot_img

Related Stories

Share via
Copy link