ವಂದೇ ಭಾರತ್ ರೈಲಿಗೆ ಪ್ರಧಾನಿಗಳ ಚಾಲನೆ : ಮಂಗಳೂರಿನಲ್ಲಿ ಬೃಹತ್ ಎಲ್‌ಪಿಜಿ ಸಂಗ್ರಹಾಗಾರ ಲೋಕಾರ್ಪಣೆ

 

ಬೆಂಗಳೂರು: ಕರ್ನಾಟಕದ ರೈಲು, ಇಂಧನ, ಮೂಲಸೌಕರ್ಯ ಮತ್ತು ತ್ಯಾಜ್ಯ ನಿರ್ವಹಣಾ ಕ್ಷೇತ್ರಗಳಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯದಲ್ಲಿ 15,600 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವರ್ಚುವಲ್ ಮೂಲಕ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರಿನ ಭಾರತೀಯ ನಿರ್ವಹಣಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಅವರು , ನಾಲ್ಕು ಅಮೃತ್ ಭಾರತ್ ರೈಲು ನಿಲ್ದಾಣಗಳು, ಮಂಗಳೂರಿನ ಬೃಹತ್ ಭೂಗತ ಎಲ್‌ಪಿಜಿ ಸಂಗ್ರಹಾಗಾರ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ರಾಷ್ಟçಕ್ಕೆ ಸಮರ್ಪಿಸಿದರು.

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಮರು ಅಭಿವೃದ್ಧಿಗೊಂಡ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳನ್ನು ಉದ್ಘಾಟಿಸಲಾಯಿತು. ಆಧುನಿಕ ಪ್ರಯಾಣಿಕ ಸೌಲಭ್ಯಗಳನ್ನು ಒಳಗೊಂಡ ಈ ನಿಲ್ದಾಣಗಳು ಸ್ಥಳೀಯ ವ್ಯಾಪಾರ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿವೆ.

ಇದರೊಂದಿಗೆ 284 ಕಿ.ಮೀ. ಗದಗ – ಹೋಟಗಿ ದ್ವಿಪಥೀಕರಣ ಯೋಜನೆಯ ಭಾಗವಾದ 45 ಕಿ.ಮೀ. ಬಾಗಲಕೋಟೆ – ವಂಡಾಲ್ ರೈಲು ಮಾರ್ಗವನ್ನು ರಾಷ್ಟçಕ್ಕೆ ಸಮರ್ಪಿಸಲಾಯಿತು. 55 ಕಿ.ಮೀ. ಉದ್ದದ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಘಾಟ್ ರೈಲು ವಿಭಾಗದ ವಿದ್ಯುದ್ದೀಕರಣ ಪೂರ್ಣಗೊಂಡಿರುವುದರಿAದ ಬೆಂಗಳೂರು – ಮಂಗಳೂರು ರೈಲು ಮಾರ್ಗ ಸಂಪೂರ್ಣ ವಿದ್ಯುದ್ದೀಕರಣಗೊಂಡAತಾಗಿದೆ.

ಮAಗಳೂರಿನಲ್ಲಿ ಬೃಹತ್ ಎಲ್‌ಪಿಜಿ ಸಂಗ್ರಹಾಗಾರ: ಮಂಗಳೂರಿನಲ್ಲಿ 850 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾದ 80 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಾಗಾರವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಿದರು. 9.4 ಕಿ.ಮೀ. ಉದ್ದದ ಪೈಪ್‌ಲೈನ್ ಹೊಂದಿರುವ ಈ ಯೋಜನೆಯು ಎಲ್‌ಪಿಜಿ ಸಾಗಣೆ ಮತ್ತು ಸಂಗ್ರಹಣಾ ವ್ಯವಸ್ಥೆಯನ್ನು ಬಲಪಡಿಸಲಿದೆ. ಅಲ್ಲದೆ, ಬೆಂಗಳೂರಿನ ದೇವನಹಳ್ಳಿ ಸಮೀಪದ ದೇವನಗೊಂದಿ ಮಾರ್ಕೆಟಿಂಗ್ ಟರ್ಮಿನಲ್ ಅನ್ನೂ ರಾಷ್ಟçಕ್ಕೆ ಸಮರ್ಪಿಸಲಾಯಿತು.

ನವೀಕರಿಸಬಹುದಾದ ಇಂಧನಕ್ಕೆ ಒತ್ತು: ಕೊಪ್ಪಳ II, ಗದಗ II ನವೀಕರಿಸಬಹುದಾದ ಇಂಧನ ವಲಯಗಳ ಪ್ರಸರಣ ಯೋಜನೆ ಹಾಗೂ ಬೀದರ್ ಸೌರ ವಿದ್ಯುತ್ ಪ್ರಸರಣ ಯೋಜನೆಗಳನ್ನು ಉದ್ಘಾಟಿಸಲಾಯಿತು. ಈ ಯೋಜನೆಗಳಿಂದ ಸುಮಾರು 2 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಹಾಗೂ 2.5 ಗಿಗಾವ್ಯಾಟ್ ಸೌರ ವಿದ್ಯುತ್ ಅನ್ನು ಗ್ರಿಡ್‌ಗೆ ರವಾನಿಸಲು ಅನುಕೂಲವಾಗಲಿದೆ.

ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದ ಪ್ರಸರಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ತ್ಯಾಜ್ಯದಿಂದ ಇಂಧನ ಉತ್ಪಾದನೆ: ಬೆಂಗಳೂರಿನ ಹರಳಕುಂಟೆಯಲ್ಲಿ ಗೇಲ್ ಸಂಸ್ಥೆಯ 160 ಕೋಟಿ ವೆಚ್ಚದ ಸಂಕೋಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಭೂಮಿಪೂಜೆ ನೆರವೇರಿಸಿದರು. ಪ್ರತಿದಿನ 300 ಮೆಟ್ರಿಕ್ ಟನ್ ಪುರಸಭೆಯ ಹಸಿ ತ್ಯಾಜ್ಯ ಸಂಸ್ಕರಿಸಿ 12.6 ಟನ್ ಜೈವಿಕ ಅನಿಲ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಈ ಘಟಕವನ್ನು ಮುಂದಿನ ದಿನಗಳಲ್ಲಿ 500 ಟನ್ ತ್ಯಾಜ್ಯ ಸಂಸ್ಕರಣೆಗೆ ವಿಸ್ತರಿಸುವ ಉದ್ದೇಶವಿದೆ.

ಒಟ್ಟಾರೆ, ರೈಲು ಸಂಪರ್ಕ, ಇಂಧನ ಭದ್ರತೆ, ನವೀಕರಿಸಬಹುದಾದ ಇಂಧನ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿರುವ ಈ ಯೋಜನೆಗಳು ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಆಯಾಮ ನೀಡುವ ನಿರೀಕ್ಷೆ ಮೂಡಿಸಿವೆ.

ಕರಾವಳಿ – ರಾಜಧಾನಿ ನಡುವೆ ವೇಗದ ಸಂಪರ್ಕ
ಬೆAಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೆಂಗಳೂರು – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್‌ಗೆ ಚಾಲನೆ ನೀಡಲಾಯಿತು. ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರುಡೇಶ್ವರ, ಗೋಕರ್ಣ ಹಾಗೂ ಕಾರವಾರ ಸೇರಿದಂತೆ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಈ ರೈಲು ಸೇವೆಯಿಂದ ಪ್ರಯಾಣಿಕರಿಗೆ ಅನುಕೂಲವಾಗುವುದರ ಜತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ.

ಯೋಗ ಕ್ಷೇತ್ರಕ್ಕೆ ಡಾ.ರಾಜ್ ನೀಡಿದ ಕೊಡುಗೆ ಸ್ಮರಿಸಿದ ಮೋದಿ

ಬೆಂಗಳೂರಿನ ಪ್ರಶಾಂತಿ ಕುಟೀರದಲ್ಲಿ ನಡೆದ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆಯ (ಎಸ್-ವ್ಯಾಸ) 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಕರ್ನಾಟಕವು ದಶಕಗಳಿಂದ ಯೋಗದ ಪ್ರಮುಖ ಕೇಂದ್ರವಾಗಿ ಗುರುತಿಸಿ ಕೊಂಡಿದೆ. ಯೋಗ ಕ್ಷೇತ್ರಕ್ಕೆ ಕನ್ನಡದ ವರನಟ ಡಾ. ರಾಜ್‌ಕುಮಾರ್ ಕೊಡುಗೆ ನೀಡಿದ್ದಾರೆ. ಯೋಗಾಭ್ಯಾಸದ ಮೂಲಕ ಜನರಿಗೆ ಪ್ರೇರಣೆ ನೀಡಿದ ಡಾ. ರಾಜ್‌ಕುಮಾರ್ ಅವರ ಪಾತ್ರವನ್ನು ಮೋದಿ ವಿಶೇಷವಾಗಿ ಉಲ್ಲೇಖಿಸಿದ್ದು ವಿಶೇಷವೆನಿಸಿದೆ. ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜ್‌ಕುಮಾರ್ ಅವರು ಯೋಗಾಭ್ಯಾಸದ ಮೂಲಕ ಜನರಿಗೆ ಪ್ರೇರಣೆಯಾಗಿದ್ದರು. ಯೋಗದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅವರ ಪಾತ್ರವನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು.

Recent Articles

spot_img

Related Stories

Share via
Copy link