ಹಿರಿಯೂರು ಉಪಚುನಾವಣೆ: ಬಿಜೆಪಿ – ಜೆಡಿಎಸ್ ಟಿಕೆಟ್ ಕಿತ್ತಾಟ : ಮೈತ್ರಿ ಮುನಿಸು, ಕೈ ಗೆಲುವಿನ ಲೆಕ್ಕಾಚಾರ!

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಚುನಾವಣೆಯ ದಿನಾಂಕ ಘೋಷಣೆಯಾಗುವ ಮುನ್ನವೇ ಅಭ್ಯರ್ಥಿ ಆಯ್ಕೆಯ ವಿಚಾರ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಎರಡೂ ಪಕ್ಷಗಳ ಹಠ ಮೈತ್ರಿಯೊಳಗಿನ ಒಗ್ಗಟ್ಟಿಗೆ ಸವಾಲಾಗಿ ಪರಿಣಮಿಸಿದೆ. ಈ ಬೆಳವಣಿಗೆಯನ್ನೇ ರಾಜಕೀಯ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಲು ಕಾಂಗ್ರೆಸ್ ತೆರೆಮರೆಯಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ.

ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರಕ್ಕೆ ಬದ್ಧವಾಗಿದೆ. ಮತ್ತೊಂದೆಡೆ, ಜೆಡಿಎಸ್ ಕೂಡ ಕ್ಷೇತ್ರದ ಮೇಲೆ ತನ್ನ ರಾಜಕೀಯ ಹಿಡಿತ ಸಾಧಿಸುವ ಉದ್ದೇಶದಿಂದ ಸ್ವತಂತ್ರವಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಉತ್ಸುಕವಾಗಿದೆ. ಹೀಗಾಗಿ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಒಮ್ಮತ ಮೂಡದೆ, ಮೈತ್ರಿ ಧರ್ಮದ ಪ್ರಶ್ನೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ?ಜೆಡಿಎಸ್ ಮೈತ್ರಿ ಮುಂದುವರಿದಿದ್ದರೂ, ಕ್ಷೇತ್ರವಾರು ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಎದುರಾಗುತ್ತಿರುವ ಭಿನ್ನಾಭಿಪ್ರಾಯಗಳು ಮೈತ್ರಿಯ ರಾಜಕೀಯ ಸಮೀಕರಣಕ್ಕೆ ಹೊಸ ತಿರುವು ನೀಡಿವೆ.

ದೆಹಲಿ ಮಟ್ಟದಲ್ಲಿ ಜೆಡಿಎಸ್ ಪ್ರಯತ್ನ

ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಕಲ್ಪಿಸಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಲೆಕ್ಕಾಚಾರವಾಗಿದೆ. ಈ ನಿಟ್ಟಿನಲ್ಲಿ ಅವರು ದೆಹಲಿ ಮಟ್ಟದಲ್ಲಿಯೇ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಬಲ ಸಿಗಲಿದೆ ಎಂಬ ನಿರೀಕ್ಷೆಯಿದೆ. ಸ್ಥಳೀಯ ರಾಜಕೀಯ ಪರಿಸ್ಥಿತಿ, ಕಾರ್ಯಕರ್ತರ ಅಭಿಪ್ರಾಯ ಹಾಗೂ ಕ್ಷೇತ್ರದಲ್ಲಿ ಪಕ್ಷದ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಈ ಬೇಡಿಕೆಯನ್ನು ಮುಂದಿಟ್ಟಿದೆ. ಬಿಜೆಪಿ ಹೈಕಮಾಂಡ್ ಈ ಮನವಿಗೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಇದೀಗ ನಿರ್ಣಾಯಕವಾಗಿದೆ.

ಬಿಜೆಪಿ ಹಠಕ್ಕೆ ಕಾರಣವೇನು?

ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಬಿಜೆಪಿಯ ಪ್ರಮುಖ ಗುರಿಯಾಗಿದೆ. ಹೀಗಾಗಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಚುನಾವಣೆಯನ್ನು ಎದುರಿಸಬೇಕು ಎಂಬ ನಿಲುವನ್ನು ಪಕ್ಷದ ರಾಜ್ಯ ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಈ ವಿಚಾರದಲ್ಲಿ ಸ್ಪಷ್ಟ ಸಂದೇಶ ನೀಡಿದ್ದಾರೆ.

?ಹಿರಿಯೂರು ಉಪಚುನಾವಣೆಯಲ್ಲಿ ದುಷ್ಟ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಅವಕಾಶವಿದೆ. ಯಾವುದೇ ಗೊಂದಲವಿಲ್ಲದೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಜೆಡಿಎಸ್ ಟಿಕೆಟ್ ಬೇಡಿಕೆ ಸಹಜ. ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ? ಎಂದು ವಿಜಯೇಂದ್ರ ಹೇಳಿದ್ದಾರೆ.

ಚುನಾವಣೆಯಲ್ಲಿ ಗೆಲುವು ಮುಖ್ಯವೇ ಹೊರತು ಟಿಕೆಟ್ ವಿಚಾರದಲ್ಲಿ ಪ್ರತಿಷ್ಠೆ ಅಲ್ಲ ಎಂಬ ಸಂದೇಶವನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ. ಆದರೆ, ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂಬ ಪಕ್ಷದ ಒತ್ತಾಯ ಮಾತ್ರ ಮುಂದುವರಿದಿದೆ. ಅಮಿತ್ ಶಾ ಅವರಿಗೆ ರಾಜ್ಯದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆಯೇ?

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಟಿಕೆಟ್ ಕಿತ್ತಾಟ ಕಾಂಗ್ರೆಸ್‌ಗೆ ರಾಜಕೀಯವಾಗಿ ಅನುಕೂಲಕರ ವಾತಾವರಣ ನಿರ್ಮಿಸುವ ಸಾಧ್ಯತೆ ಇದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ದೊಡ್ಡ ಮಟ್ಟದ ಗೊಂದಲವಿಲ್ಲ ಎನ್ನಲಾಗಿದ್ದು, ಸುಹಾಸ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದೊಳಗೆ ವಿರೋಧವಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ, ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ಗೆ ಚುನಾವಣಾ ಹೋರಾಟ ಸುಲಭವಾಗುವುದಿಲ್ಲ. ಮೈತ್ರಿ ಪಕ್ಷಗಳ ಮತಗಳು ಒಟ್ಟುಗೂಡಿದರೆ ಕಾಂಗ್ರೆಸ್ ಎದುರು ಬಲವಾದ ಸವಾಲು ಎದುರಾಗಬಹುದು. ಇದೇ ಕಾರಣಕ್ಕೆ ಎರಡೂ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯ ಕಾಂಗ್ರೆಸ್‌ಗೆ ನಿರೀಕ್ಷಿತ ರಾಜಕೀಯ ಲಾಭ ತಂದುಕೊಡಬಹುದು ಎಂಬ ಲೆಕ್ಕಾಚಾರ ನಡೆಯುತ್ತಿದೆ.

ಹಿರಿಯೂರು ಉಪಚುನಾವಣೆ ಕೇವಲ ಒಂದು ಕ್ಷೇತ್ರದ ಗೆಲುವು – ಸೋಲಿನ ಪ್ರಶ್ನೆಯಾಗಿ ಉಳಿದಿಲ್ಲ. ಬಿಜೆಪಿ?ಜೆಡಿಎಸ್ ಮೈತ್ರಿಯ ಬಲ, ನಾಯಕತ್ವದ ಸಮನ್ವಯ ಹಾಗೂ ಕಾಂಗ್ರೆಸ್‌ನ ರಾಜಕೀಯ ಚಾಣಾಕ್ಷತೆಯನ್ನು ಪರೀಕ್ಷಿಸುವ ಚುನಾವಣೆಯಾಗಿ ರೂಪುಗೊಳ್ಳುತ್ತಿದೆ. ಟಿಕೆಟ್ ಯಾರಿಗೆ ಸಿಗಲಿದೆ? ಮೈತ್ರಿ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲಿವೆಯೇ? ಅಥವಾ ಭಿನ್ನಾಭಿಪ್ರಾಯವೇ ಚುನಾವಣೆಯ ದಿಕ್ಕು ಬದಲಿಸಲಿದೆಯೇ? ಎಂಬ ಪ್ರಶ್ನೆಗಳಿಗೆ ಬಿಜೆಪಿ ಹೈಕಮಾಂಡ್‌ನ ಅಂತಿಮ ನಿರ್ಧಾರ ಉತ್ತರ ನೀಡಲಿದೆ.

ಹಿರಿಯೂರಿನ ರಾಜಕೀಯ ಅಖಾಡದಲ್ಲಿ ಅಭ್ಯರ್ಥಿಯ ಆಯ್ಕೆಗಿಂತಲೂ ಮೈತ್ರಿಯ ಒಗ್ಗಟ್ಟು ಈಗ ದೊಡ್ಡ ಪರೀಕ್ಷೆಯಾಗಿದೆ.

ಒಗ್ಗಟ್ಟಿನ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿದರೆ ಕಾಂಗ್ರೆಸ್ ಬಿಗ್ ಫೈಟ್

ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ.
ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಟ್ಟು ಹಿಡಿದಿದೆ.
ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಎಚ್.ಡಿ. ಕುಮಾರಸ್ವಾಮಿ ದೆಹಲಿ ಮಟ್ಟದಲ್ಲಿ ಪ್ರಯತ್ನ.
ಅಮಿತ್ ಶಾ ಅವರೊಂದಿಗೆ ಅಭ್ಯರ್ಥಿ ಆಯ್ಕೆ ಕುರಿತು ಕುಮಾರಸ್ವಾಮಿ ಮಾತುಕತೆ.
ಟಿಕೆಟ್ ವಿಚಾರದಲ್ಲಿ ಅಂತಿಮ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.
ಮೈತ್ರಿ ಪಕ್ಷಗಳ ಭಿನ್ನಾಭಿಪ್ರಾಯದ ಲಾಭ ಪಡೆಯಲು ಕಾಂಗ್ರೆಸ್ ಕಾರ್ಯತಂತ್ರ.
ಕಾAಗ್ರೆಸ್‌ನಿAದ ಸುಹಾಸ್‌ಗೆ ಟಿಕೆಟ್ ನೀಡುವ ಸಾಧ್ಯತೆ.
ಬಿಜೆಪಿ – ಜೆಡಿಎಸ್ ಒಗ್ಗಟ್ಟಿನ ಅಭ್ಯರ್ಥಿ ಕಣಕ್ಕಿಳಿದರೆ ಕಾಂಗ್ರೆಸ್‌ಗೆ ಕಠಿಣ ಸ್ಪರ್ಧೆ.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯ ಒಗ್ಗಟ್ಟಿಗೆ ಅಗ್ನಿಪರೀಕ್ಷೆ.
ಹೈಕಮಾಂಡ್ ನಿರ್ಧಾರದತ್ತ ಹಿರಿಯೂರು ರಾಜಕೀಯ ವಲಯದ ಚಿತ್ತ.

ಬಿಜೆಪಿ ಹೈ ಜೊತೆ ಮೈತ್ರಿ ಮಾತುಕಥೆ

ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಟ್ಟು ಹಿಡಿದಿದ್ದರೆ, ಜೆಡಿಎಸ್ ಕೂಡ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧವಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ದೆಹಲಿ ಮಟ್ಟದಲ್ಲಿ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಂತಿಮ ನಿರ್ಧಾರ ಬಿಜೆಪಿ ಹೈಕಮಾಂಡ್ ಕೈಯಲ್ಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮೈತ್ರಿ ಪಕ್ಷಗಳ ನಡುವಿನ ಈ ಗೊಂದಲವನ್ನು ರಾಜಕೀಯ ಲಾಭವಾಗಿ ಪರಿವರ್ತಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ನಿAದ ಸುಹಾಸ್ ಅಭ್ಯರ್ಥಿಯಾಗುವ ಸಾಧ್ಯತೆಗಳಿದ್ದು, ಬಿಜೆಪಿ- ಜೆಡಿಎಸ್ ಒಗ್ಗಟ್ಟಿನ ಅಭ್ಯರ್ಥಿ ಕಣಕ್ಕಿಳಿಯುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

Recent Articles

spot_img

Related Stories

Share via
Copy link