ತಿಪಟೂರು 
2018-19 ನೇ ಸಾಲಿನ ಕೃಷಿ ಇಲಾಯ ವಿವಿಧ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಚುನಾಯಿತ ಜನಪ್ರತಿನಿಧಿಗಳಿಗೆ ಮಾಹಿತಿ ಸಂಪರ್ಕ ಸಭೆಯನ್ನು ದಿ:13/08/2018 ರಂದು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ತಿಪಟೂರು ಇಲ್ಲಿ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಸಭೆÉಯಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯರುಗಳು, ಎ.ಪಿ.ಎಂ.ಸಿ ಸದಸ್ಯರುಗಳು ಹಾಗೂ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರು ಭಾಗವಹಿಸಿದ್ದ ಸಭೆಯಲ್ಲಿ ಕೃಷಿ ಇಲಾಖೆ ಮುಖೇನ ಅನುಷ್ಟಾನಗೊಳ್ಳುವ ಎಲ್ಲಾ ಯೋಜನೆಗಳ ಮಾಹಿತಿಯನ್ನು ತಾಂತ್ರಿಕ ಅಧಿಕಾರಿಯಾದ ಶ್ರೀ ಎಸ್.ಸುಧಾಕರ್ ರವರು ಮಂಡಿಸಿದರು ಹಾಗೂ ಮಾನ್ಯ ಶಾಸಕರು ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡುತ್ತಾ ಚುನಾಯಿತ ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿಕೊಂಡಲ್ಲಿ ಹಾಗೂ ಅವರ ಸಹಕಾರದೊಂದಿಗೆ ಸಾಮಾನ್ಯ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಇಲಾಖೆಯಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಒದಗಿಸಿಕೊಡಲು ಸಾಧ್ಯವಾಗತ್ತದೆ ಎಂದು ಅಭಿಪ್ರಾಯಪಟ್ಟರು ಸದರಿ ಸಭೆಯಲ್ಲಿ ಕೃಷಿ ಇಲಾಖೆಯಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಬಿ.ಜಿ ಜಯಪ್ಪ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಈ ಕಾರ್ಯಕ್ರಮವನ್ನು ಶ್ರೀ ಮಹೇಶ್ ನೀಲಗಾರ್ ನಿರೂಪಿಸಿದರು.








